ಸಿನಿಮಾ

ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ, ಕೋರೆ

ಚಿಕ್ಕೋಡಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಲೆ ಹೆಚ್ಚಾಗುತ್ತಿದ್ದು ಸುಮಾರು 130ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ಸ್ಟಾರ್ ಪ್ರಚಾರಕರು ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ವಿಶ್ವಾಸ ವ್ಯಕ್ತಪಡಿಸಿದರು.

ಅಂಕಲಿಯಲ್ಲಿ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ರಾಯಬಾಗ, ಹುಕ್ಕೇರಿ, ಚಿಕ್ಕೋಡಿ-ಸದಲಗಾ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲವು ನಿಶ್ಚಿತ ಎಂದರು. ಜಿಲ್ಲೆಯಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ಕೈಗೊಂಡಿದ್ದೇನೆ. ಮತದಾರರು ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಆಡಳಿತ ಮೇಲೆ ಇಟ್ಟಿರುವ ವಿಶ್ವಾಸ ಹಾಗೂ ಅವರ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ. ಸುಮಾರು 12ರಿಂದ 13 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಬಿ.ಎಲ್. ಸಂತೋಷ ಅವರು ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆನ್ನುವುದು ಸುಳ್ಳು. ಅವರು ರಾಷ್ಟ್ರೀಯ ನಾಯಕರು ಹಾಗೇ ಮಾತನಾಡಲು ಸಾಧ್ಯವಿಲ್ಲ. ಇದನ್ನು ವಿರೋದ ಪಕ್ಷಗಳು ಪೇಕ್ ಮಾಡಿದ್ದಾರೆ. ಲಿಂಗಾಯತರ ಬಗ್ಗೆ ಹಗುರವಾಗಿ ಯಾರು ಮಾತನಾಡಲು ಸಾಧ್ಯವಿಲ್ಲ. ಹಾಗೇನಾದರೂ ಮಾಡಿದಲ್ಲಿ ಅವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಸಿಗುತ್ತಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪ್ರಭಾಕರ ಕೋರೆ ಅವರು, ನಾನೋಬ್ಬ ನಿಷ್ಠಾವಂತ ಕಾರ್ಯಕರ್ತ ಪಕ್ಷದ ಸಿದ್ದಾಂತಗಳನ್ನು ಒಪ್ಪಿದ್ದೇವೆ. ಕೃಷ್ಣಾ ನದಿಗೆ ಪ್ರವಾಹ ಬಂದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮನೆ ಕಳೆದುಕೊಂಡ ನಿರಾಶ್ರಿತರಿಗೆ ತಲಾ 5 ಲಕ್ಷ ರೂ. ನೀಡಿದ್ದು, ಜನರ ಆಸರೆಗೆ ಬಿಜೆಪಿ ಪಕ್ಷ ಬಂದಿದೆ. ಜೆತೆಗೆ ಕಿಸಾನ ಸಮ್ಮಾನ್ ಯೋಜನೆ, ಹೀಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವದರಿಂದ ರಾಜ್ಯದಲ್ಲಿ ಬಿಜೆಪಿಗೆ ಜನ ಮತ್ತೋಮ್ಮೆ ಆರ್ಶೀವಾದ ಮಾಡಲಿದ್ದಾರೆ ಎಂದರು. ಅಶೋಕ ಪಾಟೀಲ, ತುಕಾರಾಮ ಪಾಟೀಲ ಇದ್ದರು.

Latest Posts

ಲೈಫ್‌ಸ್ಟೈಲ್