More

    ಜೆಡಿಎಸ್ ಜತೆ ಬಿಜೆಪಿ ಮೈತ್ರಿ; ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ?

    ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಅಸ್ಥಿತ್ವ ಉಳಿಸಿಕೊಳ್ಳುವುದು, ಕಾಂಗ್ರೆಸ್ ಮಣಿಸುವುದು ಸೇರಿದಂತೆ ಏನೆನೋ ಕನಸು ಹೊತ್ತು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ಗೆ ಆರಂಭದಲ್ಲೇ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ.

    ಮೈತ್ರಿ ಮಾಡಿಕೊಂಡು ತಿಂಗಳು ಉರುಳಿದರೂ ಸೀಟು ಹಂಚಿಕೆಗೆ ಬಿಜೆಪಿ ದೆಹಲಿ ಹೈಕಮಾಂಡ್ ಭೇಟಿ ಸಾಧ್ಯವಾಗುತ್ತಿಲ್ಲ. ತರಾತುರಿಯಲ್ಲಿ ಮೈತ್ರಿಯಾಗಿರುವುದರಿಂದ ಉಭಯ ಪಕ್ಷಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಬಿಜೆಪಿ ರಾಜ್ಯ ನಾಯಕರು ಒಂದು ಕಡೆ, ಜೆಡಿಎಸ್ ನಾಯಕರು ಇನ್ನೊಂದು ಕಡೆ ಎನ್ನುವ ಸ್ಥಿತಿ ಮುಂದುವರಿದಿದೆ.

    ಇನ್ನೊಂದೆಡೆ ಜೆಡಿಎಸ್ ಕೇರಳ ಘಟಕ ಮೈತ್ರಿಯನ್ನು ಸಾರಾಸಗಟ ತಿರಸ್ಕರಿಸಿದೆ. ರಾಜ್ಯದ ಅಲ್ಪಸಂಖ್ಯಾತ ನಾಯಕರು ಬಿಜೆಪಿ ಜತೆಗಿನ ಮೈತ್ರಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇನ್ನು ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿವೆ. ಆದರೆ ಜೆಡಿಎಸ್‌ನಲ್ಲಿ ಮಾತ್ರ ಅಯೋಮಯ ಸ್ಥಿತಿ ತಲೆದೋರಿದೆ.

    ಬಿಜೆಪಿ ಜತೆಗಿನ ಮೈತ್ರಿ ಕೇವಲ ಲೋಕಸಭೆ ಚುನಾವಣೆಗೆ ಮಾತ್ರ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಾಗಲಿ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯಾಗಲಿ ಕಡ್ಡಿ ತುಂಡಾಗುಂತೆ ಎಲ್ಲೂ ಹೇಳಿಲ್ಲ. ಹೀಗಾಗಿ ಪಕ್ಷದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

    ಈ ನಡುವೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಒಳಗೊಂಡಂತೆ ಏಳು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ಸನ್ನಿಹಿತವಾಗಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳ ಹೆಸರು ೋಷಿಸಿದೆ. ಬಿಜೆಪಿ ಕೂಡ ಈ ನಿಟ್ಟಿನಲ್ಲಿ ಕಾರ್ಯಮಗ್ನವಾಗಿದೆ. ಆದರೆ ಬೆಂಗಳೂರು ಶಿಕ್ಷಕರ ಕ್ಷೇತ್ರವೊಂದಕ್ಕೆ ಮಾತ್ರ ಜೆಡಿಎಸ್ ಎ.ಪಿ.ರಂಗನಾಥ್ ಹೆಸರು ೋಷಿಸಿದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ೋಷಿಸುವ ಕುರಿತು ಗೊಂದಲ ಉಂಟಾಗಿದೆ.

    ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಲೋಕಸಭಾ ಚುನಾವಣೆಗೆ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಕಾರ್ಯಕತರಿಗೆ ನೀಡಿರುವ ಕರೆ ಜೆಡಿಎಸ್‌ಗೆ ಕಸಿವಿಸಿ ಉಂಟು ಮಾಡಿದೆ. ಹೀಗಾಗಿ ಮೈತ್ರಿ ಹೇಗೆ? ಏನು? ಎತ್ತ? ಎಂಬುದು ಯಕ್ಷ ಪ್ರಶ್ನೆಯಾಗಿದೆ.

    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts