More

    ಸ್ಲಿಪ್​ ನೀಡುವ ವಿಚಾರವಾಗಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ದೂರು ದಾಖಲು

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಜನರು ತಮ್ಮ ಹಕ್ಕನ್ನು ಚಲಾಯಿಸಲು ಕಾತುರದಿಂದ ಪೋಲಿಂಗ್​ ಸ್ಟೇಷನ್​ಗಳತ್ತ ತೆರಳುತ್ತಿದ್ದಾರೆ.

    ಇನ್ನು ಮತದಾನ ಕೇಂದ್ರದ ಹೊರಗಡೆ ರಾಜಕೀಯ ಪಕ್ಷಗಳ ಏಜೆಂಟರು ಬರುವ ಮತದಾರರಿಗೆ ನೀಡುವ ಗುರುತಿನ ಚೀಟಿಯ ವಿಚಾರವಾಗಿ ಎರಡು ಪಕ್ಷಗಳ ಸದಸ್ಯರ ನಡುವೆ ಮಾರಾಮಾರಿಯಾಗಿದೆ.

    ಹೊಡೆದಾಟ

    ಬೆಂಗಳೂರು ನಗರದ ಬಿಟಿಎಂ ಲೇಔಟ್​ ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್​ನಲ್ಲಿ ಘಟನೆ ನಡೆದಿದ್ದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ.

    ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಹಲ್ಲೆ ನಡೆಸಿದ್ದು ಸ್ಲಿಫ್​ ನೀಡುವ ವಿಚಾರವಾಗಿ ಉಭಯ ಪಕ್ಷಗಳ ಮುಖಂಡರ ನಡುವೆ ಮಾರಾಮಾರಿಯಾಗಿದೆ ಎಂದು ತಿಳಿದು ಬಂದಿದೆ.

    BJP Congress

    ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶ ತಿರುಚುವುದನ್ನು ಖರ್ಗೆ ಕರಗತ ಮಾಡಿಕೊಂಡಿದ್ದಾರೆ: ಬೊಮ್ಮಾಯಿ‌ ಕಿಡಿ

    ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರೊಬ್ಬರು ಸ್ಲಿಪ್​ ನೀಡುವ ವಿಚಾರವಾಗಿ ಕಾಂಗ್ರೆಸ್​ ಮುಖಂಡರು ಮೊದಲಿಗೆ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

    ಸ್ಥಳಕ್ಕೆ ಬಂದ ಆಡುಗೋಡಿ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು ಮತ್ತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಮಾತಿನ ಚಕಮಕಿ

    ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು ಎರಡು ಪಕ್ಷಗಳ ಮುಖಂಡರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗ ಪೊಲೀಸ್​ ಉಪ ಆಯುಕ್ತ ಪಿ. ಕೃಷ್ಣಕಾಂತ್​ ಈ ಕುರಿತು ದೂರು ದಾಖಲಾಗಿದ್ದು ಯಾವುದೇ ಪಕ್ಷಗಳ ಹೆಸರನ್ನು ಉಲ್ಲೇಖಿಸಿಲ್ಲ. ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟಿದ್ದು ಈಗ ಪರಿಸ್ಥಿತಿಯನ್ನು ಶಾಂತಗೊಳಿಸಕಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts