More

    ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಶ್ರದ್ಧಾಂಜಲಿ: ರಾಜ್ಯಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಆಕ್ರೋಶ

    ಮಂಡ್ಯ: ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ರಾತ್ರಿ ಪಂಜು ಮತ್ತು ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಿದರು.
    ಹೊಸಹಳ್ಳಿ ವೃತ್ತದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭಾವಚಿತ್ರ ಇರಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಂತೆಯೇ ಹಿಂದು ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಲೆ ಪ್ರಕರಣ ಆರೋಪಿಗೆ ಗಲ್ಲು ಶಿಕ್ಷೆಗೆ ಒತ್ತಾಯಿಸಿದರು.
    ಇದೊಂದು ಹೇಯ ಕೃತ್ಯ. ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಪಕ್ರರಣವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೊಂಬತ್ತಿ (ಕ್ಯಾಂಡಲ್) ಹಚ್ಚಿ ಪ್ರತಿಭಟನಾ ಸಭೆ ನಡೆಸಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನೇ ಹೆಚ್ಚುತ್ತಿವೆ. ಸರ್ಕಾರದ ಮುಖ್ಯಸ್ಥರು ಮತ್ತು ಸಚಿವರು ತನಿಖೆಗೂ ಮೊದಲೇ ಕ್ಷುಲ್ಲಕ ಹೇಳಿಕೆ ಕೊಟ್ಟು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಗೃಹದಲ್ಲಿ ವಿಡಿಯೋ ಮಾಡಿದ್ದು, ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣ ನಡೆದಾಗಲೂ ಇವುಗಳ ಕುರಿತು ಸರ್ಕಾರವು ತಪ್ಪು ಮಾಹಿತಿ ನೀಡಿತ್ತು ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
    ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬ ವಾತಾವರಣ ನಿರ್ಮಾಣವಾಗುತ್ತಿದೆ. ರಾಜ್ಯ ಸರ್ಕಾರವು ಕೂಡಲೇ ಪೊಲೀಸ್ ಇಲಾಖೆ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಸಚಿವರು ತನಿಖೆಯ ದಾರಿ ತಪ್ಪಿಸುವಂತೆ ಹೇಳಿಕೆ ನೀಡಬಾರದು. ಕಾಂಗ್ರೆಸ್ ಸರ್ಕಾರದ ಅತಿಯಾದ ತುಷ್ಟೀಕರಣ ನೀತಿಯಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
    ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಅರುಣ್‌ಕುಮಾರ್, ಮೀನಾಕ್ಷಿ, ಜೆಡಿಎಸ್ ಮುಖಂಡರಾದ ಬಿ.ಆರ್.ಸುರೇಶ್, ನಾಗಮ್ಮ, ಪದ್ಮಾವತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts