

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಬಿಜೆಪಿ ಎರಡು ಪ್ರಮುಖ ಚುನಾವಣಾ ಸಮಿತಿಗಳನ್ನು ರಚಿಸಿ ಪ್ರಕಟಣೆ ಹೊರಡಿಸಿದೆ.
ಪಕ್ಷದ ಹಿರಿಯ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೆ ಅವರನ್ನು ಈ ಎರಡು ಸಮಿತಿಗಳಿಂದ ಕೈಬಿಟ್ಟಿರುವುದು ಹಲವು ಅನುಮಾಕ್ಕೆ ಎಡೆ ಮಾಡಿಕೊಟ್ಟಿದೆ. ನೂತನ ಸಮಿತಿ ರಚಿಸಿರುವ ಕುರಿತು ರಾಜ್ಯಾಧ್ಯಕ್ಷ ಸಿ.ಪಿ. ಜೋಶಿ ಹಾಗೂ ರಾಜಸ್ಥಾನ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.
21 ಸದಸ್ಯರ ಚುನಾವಣಾ ನಿರ್ವಹಣಾ ಸಮಿತಿಯ ನೇತೃತ್ವವನ್ನು ಮಾಜಿ ರಾಜ್ಯಸಭಾ ಸದಸ್ಯ ನಾರಾಯಣ್ ಪಂಚಾರಿಯಾ ವಹಿಸಿದ್ದಾರೆ, ಪ್ರಣಾಳಿಕೆ ಸಮಿತಿ ಅಧ್ಯಕ್ಷತೆಯನ್ನು ಕೇಂದ್ರ ಕಾನೂನು ಸಚಿವ, ಬಿಕಾನೆರ್ ಲೋಕಸಭಾ ಕ್ಷೇತ್ರದ ಸಂಸದ ಅರ್ಜುನ್ ಮೇಘವಾಲ್ ವಹಿಸಿದ್ದಾರೆ. ಈ ಎರಡು ಸಮಿತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಚಿಸಿದ್ದಾರೆ.