18 C
Bangalore
Thursday, December 5, 2019

ಮೈತ್ರಿಯಲ್ಲಿ ವರ; ಬಿಜೆಪಿಯಲ್ಲಿ ಬರ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಪರಶುರಾಮ ಭಾಸಗಿ
ವಿಜಯಪುರ: ಮೈತ್ರಿ ಸರ್ಕಾರದಲ್ಲಿ ಮೂವರು ಪ್ರಭಾವಿ ಮಂತ್ರಿಗಳನ್ನು ಹೊಂದಿದ್ದ ಜಿಲ್ಲೆಯ ರಾಜಕೀಯ ವಲಯವೀಗ ಮಂತ್ರಿಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಬಿಜೆಪಿಯಲ್ಲಿ ಮೂವರು ಶಾಸಕರಿದ್ದರೂ ಒಬ್ಬರಿಗೂ ಸಂಪುಟ ಸೇರುವ ಭಾಗ್ಯ ಲಭಿಸದಿರುವುದು ಬರದ ಜಿಲ್ಲೆಗೆ ‘ರಾಜಕೀಯ ಬರ’ ಆವರಿಸಿದಂತಾಗಿದೆ.
ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗೃಹ ಹಾಗೂ ತೋಟಗಾರಿಕೆಯಂಥ ಪ್ರಮುಖ ಖಾತೆಗಳನ್ನು ಹೊಂದಿದ್ದ ಜಿಲ್ಲೆಯ ಯಾವೊಬ್ಬ ಬಿಜೆಪಿ ಶಾಸಕನನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲ. ಮೊದಲ ಹಂತದಲ್ಲೇ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅಥವಾ ಬಸನಗೌಡ ಪಾಟೀಲ ಯತ್ನಾಳ ಇಬ್ಬರಲ್ಲಿ ಒಬ್ಬರಾದರೂ ಮಂತ್ರಿಯಾಗುವರೆಂಬ ನಿರೀಕ್ಷೆ ಸುಳ್ಳಾಗಿದೆ. ಇದು ಬೆಂಬಲಿಗರಲ್ಲಿ ಮಾತ್ರವಲ್ಲ ಜಿಲ್ಲೆ ರಾಜಕೀಯ ವಲಯದಲ್ಲೂ ಅಸಮಾಧಾನ ಮೂಡಿಸಿದೆ.

ಕಮರಿದ ಪಾಟೀಲತ್ರಯರ ಕನಸು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಎರಡು ಬಾರಿ ಸಂಸದರಾಗಿ, ಮಾಜಿ ಪ್ರಧಾನಿ ದಿ. ಅಟಲ್‌ಬಿಹಾರಿ ವಾಜಪೇಯಿ ಸಂಪುಟದಲ್ಲಿ ರೈಲ್ವೆ ಮತ್ತು ಜವಳಿ ಖಾತೆ ಸಚಿವರಾಗಿದ್ದವರು. ಬಿಜೆಪಿಯಿಂದ ಶಾಸಕರಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯರಾಗಿದ್ದಲ್ಲದೇ ಮತ್ತೆ ಬಿಜೆಪಿ ಸೇರಿ ಶಾಸಕರಾಗಿ ಆಯ್ಕೆಯಾಗಿದ್ದವರು. ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಕಾಣಿಸಿಕೊಂಡಿದ್ದರು. ಲೋಕಸಭೆ ಚುನಾವಣೆಯಲ್ಲೂ ರಾಜ್ಯಾದ್ಯಂತ ಸಂಚರಿಸಿ ಪಕ್ಷದ ಪರ ಪ್ರಚಾರ ನಡೆಸಿದ್ದರು. ಆ ಮೂಲಕ ತಾವು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ ಮತ್ತು ತಾವೊಬ್ಬ ರಾಜ್ಯಮಟ್ಟದ ನಾಯಕ ಎಂಬುದನ್ನು ಬಿಂಬಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಲಿಂಗಾಯತ ಸಮುದಾಯದ ಹಿರಿಯ ನಾಯಕ ಎಂಬ ಪಟ್ಟ ಹೊತ್ತಿದ್ದರು. ಆದರೆ, ಬಿಜೆಪಿ ಸಚಿವ ಸಂಪುಟದಲ್ಲಿ ಈ ಯಾವ ಅಂಶವೂ ಪರಿಗಣನೆಯಾಗಲಿಲ್ಲವೇ? ಎಂಬ ಪ್ರಶ್ನೆ ಕಾಡುತ್ತಿದೆ.
ಇನ್ನು ಪಕ್ಷದಿಂದ ಪಕ್ಷಕ್ಕೆ ನೆಗೆಯುತ್ತಾ ಚುನಾವಣೆ ಹೊಸ್ತಿಲ್ಲಿ ಕಮಲ ಹಿಡಿದಿದ್ದ ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ‘ಪ್ರೊಫೈಲ್’ ಹಿರಿದಾದರೂ ಬಿಜೆಪಿ ಗದು ಚಿಕ್ಕದಾಯಿತೇನೋ? ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮುದ್ದೇಬಿಹಾಳದಲ್ಲಿ ಬಿಜೆಪಿ ಧ್ವಜ ನೆಟ್ಟಿದ್ದ ನಡಹಳ್ಳಿಗೆ ಮಂತ್ರಿ ಸ್ಥಾನ ಸಿಗಬೇಕೆಂದು ಅವರ ಹಿಂಬಾಲಕರು ಪಟ್ಟ ಪರಿಶ್ರಮಕ್ಕೆ ಬೆಲೆ ಸಿಗಲಿಲ್ಲ. ಇನ್ನು ಪ್ರಥಮ ಬಾರಿಗೆ ಶಾಸಕರಾಗಿದ್ದ ಸೋಮನಗೌಡ ಪಾಟೀಲರ ಕನಸು ಕೂಡ ಕಮರಿದೆ.

ಯತ್ನಾಳರಿಗೆ ಮಾತೇ ಮುಳ್ಳಾಯಿತೇ?: ವಿವಾದಾತ್ಮಕ ಹೇಳಿಕೆಯಿಂದಲೇ ಜನಪ್ರಿಯತೆ ಗಳಿಸಿದ್ದ ಶಾಸಕ ಯತ್ನಾಳರ ಮಾತೇ ಮಂತ್ರಿಗಿರಿ ಮುಳ್ಳಾಯಿತೇ? ಎಂಬ ಪ್ರಶ್ನೆ ಕಾರ್ಯಕರ್ತರನ್ನು ಕಾಡುತ್ತಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲೇ ಮಾಜಿ ಸಚಿವ ಡಿ.ಕೆ. ಶಿವಕುಮಾರ ವಿರುದ್ಧ ದೂರುವ ಮೂಲಕ ಯತ್ನಾಳರು ಮಾನನಷ್ಟ ಮೊಕ್ಕದ್ದಮೆಗೆ ಗುರಿಯಾದರು. ಯತ್ನಾಳರ ಹೇಳಿಕೆ ಖಂಡಿಸಿ ಡಿಕೆಶಿ 2.4 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದರು.
ಇನ್ನು ಕಾಂಗ್ರೆಸ್‌ನ ಪ್ರಭಾವಿ ಶಾಸಕರುಗಳ ಬಗ್ಗೆ ಮೃದು ಧೋರಣೆ ತಾಳಿರುವ ಯತ್ನಾಳರು ಅವರ ಕೆಲಸ ಕಾರ್ಯಗಳನ್ನು ಆಗಾಗ ಮನಃ ಪೂರ್ವಕವಾಗಿ ಕೊಂಡಾಡುತ್ತಲೇ ಇರುತ್ತಾರೆ. ಇದು ಸಹ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿರುವ ಸಾಧ್ಯತೆಯೂ ಇದೆ. ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲಿದ್ದು ಮಂತ್ರಿಗಿರಿ ತಪ್ಪಲು ಕಾಣದ ಕೈಗಳ ಕೈವಾಡವೇನಾದರೂ ಇದೆಯಾ? ಎಂಬ ಗುಮಾನಿಯೂ ಕಾರ್ಯಕರ್ತರಲ್ಲಿದೆ.

ಉಸ್ತುವಾರಿ ಹೊಣೆ ಯಾರಿಗೆ?: ಅಂದುಕೊಂಡಂತೆ ಮುಧೋಳ ಶಾಸಕ ಗೋವಿಂದ ಕಾರಜೋಳರ ಕೈಗೆ ಜಿಲ್ಲೆ ಉಸ್ತುವಾರಿ ಚುಕ್ಕಾಣಿ ಪಕ್ಕಾ ಎನ್ನಲಾಗುತ್ತಿದೆಯಾದರೂ ಅಂತಿಮ ಗಳಿಗೆಯಲ್ಲಿ ಸಂಪುಟ ಸೇರಿದ ಮಾಜಿ ಶಾಸಕ ಅಥಣಿಯ ಲಕ್ಷ್ಮಣ ಸವದಿ ಹೆಸರು ಹೊಸದಾಗಿ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸವದಿ ಸಚಿವ ಸಂಪುಟ ಸೇರುವರೆಂಬ ನಿರೀಕ್ಷೆ ಬಿಜೆಪಿ ವಲಯದಲ್ಲಿರಲಿಲ್ಲ. ಇದೀಗ ಸವದಿ ಸಹ ಸಂಪುಟ ಸೇರಿದ್ದು ಉಸ್ತುವಾರಿ ಹೊಣೆ ಯಾರ ಕೈಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ.

ನೆನಪಾದ ಕೌದಿ ಕಾಳಗ: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದ ಉಸ್ತುವಾರಿ ಹೊತ್ತಿದ್ದ ಲಕ್ಷ್ಮಣ ಸವದಿ ಶಾಸಕ ಎಂ.ಬಿ. ಪಾಟೀಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ‘ಎಂ.ಬಿ. ಗೌಡ್ರಿಗೆ ಕೌದಿ ಹೊಚ್ಚೂದು ಗ್ಯಾರಂಟಿ’ ಎಂದಿದ್ದರು. ಪರಿಣಾಮ ಎಂ.ಬಿ. ಪಾಟೀಲರು ಸಹ ಅಥಣಿ ಕ್ಷೇತ್ರದಲ್ಲಿ ಸವದಿಗೆ ಸೋಲುಣಿಸಲು ಪರೋಕ್ಷವಾಗಿ ಕೈಚಳಕ ತೋರಿದರೆನ್ನಲಾಗಿತ್ತು. ಅಲ್ಲದೇ, ಪರಾಭವಗೊಂಡಿದ್ದ ಸವದಿಗೆ ಕೌದಿ ಕಳುಹಿಸಿಕೊಡುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಲೇವಡಿ ಮಾಡಿದ್ದರು. ಇದೀಗ ಅಥಣಿ ಶಾಸಕರಾಗದೇ ಸಂಪುಟ ಸೇರಿದ್ದು ಬಿಜೆಪಿಯಲ್ಲಿ ಮಾತ್ರವಲ್ಲ ಪ್ರಬಲ ಗಾಣಿಗ ಸಮುದಾಯದಲ್ಲೂ ಸಂತಸ ತರಿಸಿದೆ. ಹೀಗಾಗಿ ಅವರನ್ನೇ ಜಿಲ್ಲೆ ಉಸ್ತುವಾರಿ ಮಾಡಿದರೆ ‘ಕೌದಿ ಕಾಳಗ’ಕ್ಕೆ ತಾರ್ಕಿಕ ಅಂತ್ಯ ಸಿಗಬಹುದೆಂದು ಹೆಸರು ಹೇಳಲಿಚ್ಚಿಸದ ಕಾರ್ಯಕರ್ತರೊಬ್ಬರು ತಮ್ಮ ಮನದಿಂಗಿತ ಹೊರಹಾಕಿದರು.

ವಿಜಯಪುರ ಜಿಲ್ಲೆಗೆ ಮಂತ್ರಿ ಸ್ಥಾನ ಸಿಗದಿರುವುದು ಬೇಸರ ತಂದಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹಿರಿಯ ರಾಜಕಾರಣಿ. ಅವರಿಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ಮುಂಬರುವ ದಿನಗಳಲ್ಲಾದರೂ ಹೈಕಮಾಂಡ್ ಯತ್ನಾಳರಿಗೆ ಅವಕಾಶ ಕಲ್ಪಿಸಬೇಕು.
ರಾಹುಲ್ ಜಾಧವ, ಬಿಜೆಪಿ ಮುಖಂಡ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...