

ಶಿವಮೊಗ್ಗ: ಗಾಂಜಾ ಸೇರಿ ಮಾದಕ ವಸ್ತುಗಳ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಠದ ಪದಾಧಿಕಾರಿಗಳು ಶುಕ್ರವಾರ ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಗಾಂಜಾ ಹಾಗೂ ಇನ್ನಿತರ ಮಾದಕ ಪದಾರ್ಥಗಳನ್ನು ಜಿಲ್ಲೆಯ ವಿವಿಧೆಡೆ ಮಾರಾಟ ಮಾಡಲಾಗುತ್ತಿದೆ. ಹಲವೆಡೆ ಗಾಂಜಾ ಬೆಳೆಯಲಾಗುತ್ತಿದೆ. ಹೀಗಾಗಿ ಮಾದಕ ವ್ಯಸನದಿಂದ ಯುವಜನರು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನಗಳಿಂದ ಕೊಲೆ, ಸುಲಿಗೆ ಘಟನೆಗಳು ನಡೆಯುತ್ತಿವೆ. ಮಾದಕ ಪದಾರ್ಥಗಳ ಮಾರಾಟ ತಡೆಯಬೇಕು. ಗಾಂಜಾ ಬೆಳೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ, ರಾಜ್ಯ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಸಂಚಾಲಕ ಭವಾನಿ ರಾವ್ ಮೋರೆ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ಜಿಲ್ಲಾ ಕಾರ್ಯದರ್ಶಿಗಳಾದ ಎನ್.ಕೆ.ಜಗದೀಶ್, ಸುಮಲತಾ ಭೂಪಳಂ, ಜಿಲ್ಲಾ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಅಧ್ಯಕ್ಷ ರಾಕೇಶ್ ಗೌಡ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಹರೀಶ್ ನಾಯಕ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್.ವಿ.ದರ್ಶನ್, ನಗರ ಯುವ ಮೋರ್ಚಾ ಅಧ್ಯಕ್ಷ ರಾಹುಲ್ ಬಿದರೆ ಇತರರಿದ್ದರು.