ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಭೆ

bjp
ಭಾರತೀಯ ಜನತಾ ಪಾರ್ಟಿ ಉಡುಪಿ ಹಿಂದುಳಿದ ವರ್ಗಗಳ ಮೋರ್ಚಾದ ಕುಂದಾಪುರ, ಬೈಂದೂರು, ಉಡುಪಿ ಗ್ರಾಮಾಂತರ ಮಂಡಲ ಸಂಘಟನಾ ಸಭೆ ನಡೆಯಿತು
Published on

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಕುಂದಾಪುರ, ಬೈಂದೂರು, ಉಡುಪಿ ಗ್ರಾಮಾಂತರ ಮಂಡಲ ಸಂಘಟನಾ ಸಭೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ವಿಜಯ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ ಪೂಜಾರಿ, ಉಡುಪಿ ಜಿಲ್ಲಾ ಸಹ ಪ್ರಭಾರಿ ಅರುಣ್ ಬಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ನಿಕಟಪೂರ್ವ ಅಧ್ಯಕ್ಷ ಶಂಕರ್, ಉಡುಪಿ ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ರಾಜಶೇಖರ ದೇವಾಡಿಗ, ಜಿಲ್ಲಾ ಕಾರ್ಯದರ್ಶಿ ಚಂದ್ರ ಜೋಗಿ, ಶಾಂತಿ ಖಾರ್ವಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ್ ಮೊಗವೀರ, ಕುಂದಾಪುರ ಒಬಿಸಿ ಮಂಡಲ ಅಧ್ಯಕ್ಷ ಸುರೇಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧೀರ್, ಬೈಂದೂರು ಒಬಿಸಿ ಮಂಡಲ ಅಧ್ಯಕ್ಷ ಶಿವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ, ರಾಘವೇಂದ್ರ ಕೊಠಾರಿ, ಬ್ರಹ್ಮಾವರ ಒಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net