ರಾಜ್ಯಕ್ಕೆ ಕಾಂಗ್ರೆಸ್‌ನಷ್ಟೇ ಬಿಜೆಪಿಯಿಂದಲೂ ದ್ರೋಹ: ಕುಮಾರಸ್ವಾಮಿ

BJP vs Congress
Published on

ಬೆಂಗಳೂರು: ನಮ್ಮ ರಾಜ್ಯಕ್ಕೆ ಕಾಂಗ್ರೆಸ್ ಎಷ್ಟು ದ್ರೋಹ ಮಾಡಿದೆಯೋ ಅಷ್ಟೇ ದ್ರೋಹವನ್ನು ಬಿಜೆಪಿ ಕೂಡ ಮಾಡಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದು ಬಿಜೆಪಿಯ ಮಾಜಿ ಸಚಿವರೊಬ್ಬರು ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಯಿಸಿದರು.

ನಮಗೂ ಬಿಜೆಪಿ ಜತೆ ಹೋಗುವ ದಾರಿದ್ರ್ಯ ಬಂದಿಲ್ಲ. ನಾನು ಕಾರ್ಯಕರ್ತರಿಗೆ ಹೇಳುತ್ತೇನೆ. ಸದನದಲ್ಲಿ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಿದ್ದೇನೆ. ಅಲ್ಲಿ ಬಿಜೆಪಿ ಅಧಿಕೃತ ವಿರೋಧ ಪಕ್ಷ, ಕೆಲವೊಮ್ಮೆ ಅವರ ಜತೆ ಸೇರಿ ಹೋರಾಟ ಮಾಡಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಯಾರ ಬಳಿಗೂ ಭಿಕ್ಷೆ ಬೇಡುವ ಪರಿಸ್ಥಿತಿ ಇಲ್ಲ. ನಾನು ಯಾರ ಮನೆಯ ಬಾಗಿಲಿಗೂ ಹೋಗುವುದಿಲ್ಲ ಎಂದು ಹೇಳಿದರು.

ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ:
ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net