More

  ಕಾಂಗ್ರೆಸ್​ ಅಭ್ಯರ್ಥಿ ಗೆಲುವಿನ ಸುದ್ದಿ ಕೇಳಿ ಮೂರ್ಛೆ ಹೋದ ಬಿಜೆಪಿ ಅಧ್ಯಕ್ಷ

  ಕಲಬುರಗಿ: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟಗೊಂಡಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಕಲಬುರಗಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಬಿಜೆಪಿಯ ಡಾ. ಉಮೇಶ್​ ಜಾಧವ್​ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 2019 ಚುನಾವಣೆ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.

  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಸಾಧಿಸಿರುವ ವಿಚಾರ ಕೇಳಿ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ ಮೂರ್ಛೆ ಹೋಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು ಅಸ್ವಸ್ಥರನ್ನು ವೀರಣ್ಣ ಯಾರಿ ಎಂದು ಗುರುತಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

  ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಲ್ಲಿ ಜನರ ಹೃದಯ ಗೆದ್ದ ಡಾಕ್ಟರ್​ ಸಿ.ಎನ್ ಮಂಜುನಾಥ್​

  ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿದ್ದ ಮತ ಎಣಿಕೆ ವೇಳೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವಿಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಪರ ಮತಗಳ ದಾಖಲೆಯನ್ನು ಪಟ್ಟಿ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿಯ ಸೋಲಿನ ಸುದ್ದಿ ಕೇಳುತ್ತಿದ್ದಂತೆ ವೀರಣ್ಣ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ಧಾರೆ.

  ಈ ಕುರಿತು ಮಾತನಾಡಿರುವ ಬಿಜೆಪಿ ನಾಯಕರೊಬ್ಬರು, ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಿದಾಗ ಚಿತ್ತಾಪುರದಿಂದ ಪ್ರಧಾನಿ ಭೇಟಿಗೆ ವೀರಣ್ಣ ಆಯ್ಕೆಯಾಗಿದ್ದರು. ಈ ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಕೈ ಬಲಪಡಿಸಲಾಗುವುದು ಎಂದು ವೀರಣ್ಣ ಪ್ರಧಾನಿ ಅವರಿಗೆ ಮಾತು ಕೊಟ್ಟಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಸೋಲು ಕಂಡ ಕಾರಣ ಬೇಸರಗೊಂಡಿದ್ದ ವೀರಣ್ಣ ಕುಳತ ಜಾಗದಲ್ಲೇ ಮೂರ್ಛೆ ಹೋಗಿದ್ದಾರೆ. ಕೂಡಲೇ ಆವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

  See also  22 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಮಾರಿ 160 ಜನರಿಗೆ ಆಕ್ಸಿಜನ್​ ಹಂಚಿದ ಆಕ್ಸಿಜನ್​ ಮ್ಯಾನ್​!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts