Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ಬಿಜೆಪಿಯಿಂದ ಸಭಾತ್ಯಾಗ

Thursday, 12.07.2018, 6:48 PM       No Comments

ವಿಧಾನಸಭೆ: ಸಹಕಾರ ಸಂಘಗಳಲ್ಲಿನ ಒಂದು ಲಕ್ಷ ರೂಪಾಯಿಗಳ ವರೆಗಿನ ರೈತರ ಚಾಲ್ತಿ ಸಾಲವನ್ನೂ ಮನ್ನಾ ಮಾಡುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದ ನಂತರ ಪ್ರತಿಪಕ್ಷ ಬಿಜೆಪಿ ಗುರುವಾರ ಸಭಾತ್ಯಾಗ ಮಾಡಿದೆ.

ರೈತರ ಸಂಪೂರ್ಣ ಸಾಲಮನ್ನಾ, ಸ್ತ್ರೀ ಶಕ್ತಿ ಸಂಘಗಳಲ್ಲಿನ ಸಾಲಮನ್ನಾ, ನೇಕಾರರ ಸಾಲಮನ್ನಾ, ಪೆಟ್ರೋಲ್​, ಡಿಸೇಲ್​ ಮೇಲಿನ ತೆರಿಗೆ ಇಳಿಕೆ, ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್​ ನೀಡಲು ಬಿಜೆಪಿ ಸದನದಲ್ಲಿ ಸರ್ಕಾರವನ್ನು ಕಲಾಪ ಆರಂಭವಾದಾಗಿನಿಂದಲೂ ಒತ್ತಾಯಿಸುತ್ತಲೇ ಇತ್ತು.

ಆದರೆ, ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸಹಕಾರಿ ಬ್ಯಾಂಕ್​ಗಳಲ್ಲಿನ ಒಂದು ಲಕ್ಷ ರೂಪಾಯಿಗಳ ವರೆಗಿನ ರೈತರ ಚಾಲ್ತಿ ಸಾಲಮನ್ನಾ ಮಾಡುವ ನಿರ್ಧಾರವನ್ನಷ್ಟೇ ಪ್ರಕಟಿಸಿದರು. ಜತೆಗೆ ಕಡಿತಗೊಂಡಿರುವ ಅನ್ನಭಾಗ್ಯ ಅಕ್ಕಿಯನ್ನು ಮರಳಿ ನೀಡುವ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಆದರೆ, ಮುಖ್ಯಮಂತ್ರಿಗಳ ನಿರ್ಧಾರದಿಂದ ತೃಪ್ತಿ ಹೊಂದದ ಬಿಜೆಪಿ ತನ್ನೆಲ್ಲ ಬೇಡಿಕೆಗಳನ್ನು ಪರಿಗಣಿಸುವಂತೆ ಒತ್ತಾಯಿಸಿತು. ಕೊನೆಗೆ ಪ್ರತಿಪಕ್ಷ ನಾಯಕ ಬಿ.ಎಸ್.​ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭಾತ್ಯಾಗ ಮಾಡುವ ಮೂಲಕ ತನ್ನ ಪ್ರತಿಭಟನೆಯನ್ನು ಮುಂದುವರಿಸಿತು.

Leave a Reply

Your email address will not be published. Required fields are marked *

Back To Top