More

    ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಬದ್ಧ

    ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಹೇಳಿದರು.

    ನಗರದ ಖಾಸಗಿ ಹೋಟೆಲ್​ನಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‘ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸೂಚನೆಯಂತೆ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷ ಸಿದ್ಧವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮಸ್ವರಾಜ್ಯ ಸಮಾವೇಶ ಸಹ ನಡೆಸಲಾಗಿದೆ. ಈ ಸಮಾವೇಶದಿಂದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಲಾಗಿದೆ’ ಎಂದರು.

    ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕಾರ್ಯಕರ್ತರನ್ನು ನಾಯಕರನ್ನಾಗಿ ರೂಪಿಸಲು ಪಂಚಜನ್ಯ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ ಎಂದರು.

    ಬಿಜೆಪಿ ಮುಖಂಡ ಅನೀಲ ಮೆಣಸಿನಕಾಯಿ ಮಾತನಾಡಿ, ಗದಗ ಮತಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ವಾರ್ಡ್​ಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದರು.

    ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಪಾರದರ್ಶಕ ಚುನಾವಣೆಗೆ ಅವಕಾಶವಿಲ್ಲದೆ ಬೆದರಿಕೆ, ದಬ್ಬಾಳಿಕೆ ಈಗಲೂ ಮುಂದುವರಿದಿದೆ. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಜತೆಗೆ ಸೂಕ್ಷ್ಮ ಗ್ರಾಮಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಪಾರದರ್ಶಕವಾಗಿ ಚುನಾವಣೆ ನಡೆದರೆ 10 ಗ್ರಾಮ ಪಂಚಾಯಿತಿಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು.

    ಗದಗ ಶಾಸಕರು ಸಚಿವರಾಗಿ ಹಲವಾರು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ. ಆದರೆ, ಅವರು ಕ್ಷೇತ್ರದ ಜನರಿಗೆ ನೀಡಿದ ಕೊಡುಗೆಗಳು ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

    ಸಭೆಯಲ್ಲಿ ರಾಷ್ಟ್ರೀಯ ಪರಿಷತ್ ಸದಸ್ಯ ಕಾಂತಿಲಾಲ್ ಬನ್ಸಾಲಿ, ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಗ್ರಾಮೀಣ ಮಂಡಲದ ಅಧ್ಯಕ್ಷ ದ್ಯಾಮಣ್ಣ ನೀಲಗುಂದ, ಜಿಲ್ಲಾ ಉಪಾಧ್ಯಕ್ಷ ಭದ್ರೇಶ್ ಕುಸಲಾಪುರ, ರಾಜು ಕುಲಕರ್ಣಿ, ರವಿ ವಗ್ಗನವರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts