ಒಡಿಶಾದಲ್ಲಿ ಇವಿಎಂ ಧ್ವಂಸ: ಬಿಜೆಪಿ ಅಭ್ಯರ್ಥಿ ಪ್ರಶಾಂತ್​ ಜಗದೇವ್​ ಬಂಧನ

bjp mla
Published on

ಭುವನೇಶ್ವರ: ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ಇವಿಎಂ ಧ್ವಂಸ ಮಾಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಪ್ರಶಾಂತ್​ ಜಗದೇವ್​ ಅವರನ್ನು ಪೊಲೀಸರ ಬಂಧಿಸಿದ್ದಾರೆ.

ಅಭ್ಯರ್ಥಿ ಪ್ರಶಾಂತ್ ಜಗದೇವ್ ತಮ್ಮ ಪತ್ನಿಯೊಂದಿಗೆ ಮತ ಚಲಾಯಿಸಲು ಬೇಗನಿಯಾ ವಿಧಾನಸಭಾ ಕ್ಷೇತ್ರದ ಬೋಲಗಾಡ್ ಬ್ಲಾಕ್‍ನ ಕೌನ್ರಿಪಟ್ನಾದ ಬೂತ್‍ ನಂ. 114ಕ್ಕೆ ತೆರಳಿದ್ದರು. ಈ ವೇಳೆ ಇವಿಎಂ ತಾಂತ್ರಿಕ ದೋಷದಿಂದ ಕೆಲ ಸಮಯ ಅವರು ಕಾಯಬೇಕಾಗಿ ಬಂತು. ಇದರಿಂದ ಆಕ್ರೋಶಗೊಂಡ ಅವರು, ಚುನಾವಣಾ ಸಿಬ್ಬಂದಿ ಮೇಲೆ ಕಿಡಿಕಾರಿದ್ದಾರೆ. ಬಳಿಕ ಇವಿಎಂ ಅನ್ನು ಎಳೆದಾಡಿದ್ದು, ಅದು ಕೆಳಗೆ ಬಿದ್ದು ಒಡೆದು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಚುನಾವಣಾ ಸಿಬ್ಬಂದಿ ದೂರು ನೀಡಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯ ಜೊತೆಗೆ ಐಪಿಸಿಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಖುರ್ದಾ ಜೈಲಿನಲ್ಲಿ ಇರಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಪೊಲೀಸರು ಮನವಿ ಮಾಡಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ನಾವು ಜಿಲ್ಲಾ ಚುನಾವಣಾಧಿಕಾರಿ (ಡಿಇಒ) ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು, ಈ ಘಟನೆ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ಶಾಸಕರು ಬೂತ್‌ನಲ್ಲಿ ಗಲಾಟೆ ಸೃಷ್ಟಿಸಿ, ಮತದಾನಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಮತಗಟ್ಟೆ ಸಿಬ್ಬಂದಿಯನ್ನು ನಿಂದಿಸಿದ್ದಾರೆ ಎಂದು ಚುನಾವಣಾ ಸಿಬ್ಬಂದಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಆಡಳಿತಾರೂಢ ಬಿಜೆಡಿ ಕೂಡ ಪ್ರಶಾಂತ್ ಜಗದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗೆ (ಸಿಇಒ) ದೂರು ಸಲ್ಲಿಸಿದೆ. "ಅವರು ಮತಗಟ್ಟೆಯಲ್ಲಿದ್ದ ಮತಗಟ್ಟೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದರು ಮತ್ತು ನಂತರ ಭುವನೇಶ್ವರ ಸಂಸದ ಅಪರಾಜಿತಾ ಸಾರಂಗಿ ಅವರ ವಾಹನದಲ್ಲಿ ಅಡಗಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ" ಎಂದು ಬಿಜೆಡಿ ವಕ್ತಾರ ಸಸ್ಮಿತ್ ಪಾತ್ರ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net