ಸಿನಿಮಾ

ಮರು ಎಣಿಕೆಯಲ್ಲಿ ಒಲಿದ ಅದೃಷ್ಟ; ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ 16 ಮತಗಳ ಅಂತರದಿಂದ ಗೆದ್ದ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಮರು ಎಣಿಕೆಯಲ್ಲಿ ಕೇವಲ 16 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಡಿಮೆ ಮತಗಳ ಅಂತರದಿಂದ ಕಾಂಗ್ರೆಸ್​ನ ಸೌಮ್ಯ ರೆಡ್ಡಿ ಮುನ್ನಡೆ ಕಾಯ್ದುಕೊಂಡರೂ ಬಿಜೆಪಿ ಅಭ್ಯರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮರು ಎಣಿಕೆಗೆ ಪಟ್ಟು ಹಿಡಿದರು. ಇದು ಗೊಂದಲಕ್ಕೆ ಈಡು ಮಾಡುಕೊಟ್ಟಿದ್ದು ಫಲಿತಾಂಶ ಪ್ರಕಟಿಸಲು ಚುನಾವಣಾಧಿಕಾರಿಗಳಿಗೆ ಸಾಧ್ಯವಾಗಲಿಲ್ಲ. ಗೊಂದಲ ಮತ್ತಷ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಹಿರಿಯ ನಾಯಕರು ಎಣಿಕೆ ಕೇಂದ್ರಕ್ಕೆ ದೌಡಾಯಿಸಿ ಬಂದರು.

Latest Posts

ಲೈಫ್‌ಸ್ಟೈಲ್