More

    ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನ: ಡಾ. ಧನಂಜಯ ಸರ್ಜಿ

    ಉಡುಪಿ: ಪ್ರತಿ ವರ್ಷ ರಾಜ್ಯದಲ್ಲಿ 2 ಲಕ್ಷ ಯುವತಿಯರು, 1.70 ಲಕ್ಷ ಯುವಕರು ಪದವೀ ಪಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯಕೇಂದ್ರಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಆರೋಗ್ಯ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳ ಅಗತ್ಯವಿದೆ. ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸಬೇಕು. ಸರ್ಕಾರಿ ನೌಕರರಿಗೂ ಖಾಸಗಿ ಆಸ್ಪತ್ರೆಗಳಲ್ಲೂ ಉನ್ನತ ಚಿಕಿತ್ಸಾ ಸೌಲಭ್ಯಗಳು ಲಭಿಸಬೇಕು. ಇಎಸ್​ಐ ಮಿತಿಯನ್ನು ಹೆಚ್ಚಿಸಬೇಕು. ಉಡುಪಿಗೆ ಸರ್ಕಾರಿ ಮೆಡಿಕಲ್​ ಕಾಲೇಜು ಮಂಜೂರುಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಲಾಗುವುದು. ಪದವೀಧರ ಕ್ಷೇತ್ರದಲ್ಲಿ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.

    ರಾಜ್ಯ ಕಾಂಗ್ರೆಸ್​ ಸರ್ಕಾರ ವಿದ್ಯಾರ್ಥಿಗಳಿಗೆ ಬಹಳಷ್ಟು ಅನ್ಯಾಯ ಎಸಗಿದೆ. ವಿಕಾಸ ಶಾಲಾ ಕೊಠಡಿ ಅನುದಾನ ತಡೆಹಿಡಿದಿದೆ. ರೈತರ ವಿದ್ಯಾನಿಧಿ ರದ್ದು ಮಾಡಿದ್ದಾರೆ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ವಿಪ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್​ ಕುಮಾರ್​, ಶಾಸಕ ಯಶ್ಪಾಲ್​ ಸುವರ್ಣ, ವಿಪ ಸದಸ್ಯ ಡಿ.ಎಸ್​. ಅರುಣ್​, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಸುರೇಶ್​ ನಾಯಕ್​, ಉದಯ್​ ಕುಮಾರ್​ ಶೆಟ್ಟಿ, ಜೆಡಿಎಸ್​ ಜಿಲ್ಲಾಧ್ಯಕ್ಷ ಯೋಗೀಶ್​ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts