ಉಪಚುನಾವಣೆ: ರಾಮನಗರ, ಮಂಡ್ಯ ಬಿಟ್ಟು ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮೂರು ಲೋಕಸಭೆ ಸ್ಥಾನಗಳು ಮತ್ತು ಎರಡು ವಿಧಾನಸಭೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಇಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕೋರ್​ ಕಮಿಟಿ ಸಭೆಯಲ್ಲಿ ರಾಮನಗರ ಮತ್ತು ಮಂಡ್ಯ ಕ್ಷೇತ್ರಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿ.ವೈ.ರಾಘವೇಂದ್ರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು. ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಿದೆ.

ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಸಂಸದದೆ ಜೆ. ಶಾಂತಾ ಅವರ ಹೆಸರನ್ನು ಶಿಪಾರಸು ಮಾಡಲಾಗಿದೆ. ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಶ್ರೀಕಾಂತ್ ಕುಲಕರ್ಣಿ ಅವರನ್ನು ಶಿಫಾರಸು ಮಾಡಲಾಗಿದೆ.

ಮಂಡ್ಯ ಮತ್ತು ರಾಮನಗರ ರಾಜ್ಯಾಧ್ಯಕ್ಷರ ವಿವೇಚನೆಗೆ
ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಗಿದೆ.

ಎಲ್ಲ ಕ್ಷೇತ್ರಗಳಿಗೂ ಉಸ್ತುವಾರಿಗಳ ನೇಮಕ

  • ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ, ಜಿ.ಎಂ.ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಸುನಿಲ್ ಕುಲಕರ್ಣಿ, ರಾಜೀವ್ ಕುಡಚಿ, ಎನ್.ಜೀವರಾಜ್.
  • ಬಳ್ಳಾರಿ: ರಮೇಶ್ ಜಿಗಜಿಣಗಿ, ಬಿ.ಶ್ರೀರಾಮುಲು, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್, ಪ್ರಭು ಚವ್ಹಾಣ್, ರಾಮಣ್ಣ ಲಮಾಣಿ.
  • ಮಂಡ್ಯ: ಆರ್.ಅಶೋಕ್, ಪ್ರತಾಪ್ ಸಿಂಹ, ನಾಗೇಂದ್ರ, ಡಿ.ಎಸ್.ವೀರಯ್ಯ.
  • ಜಮಖಂಡಿ: ಜಗದೀಶ್ ಶೆಟ್ಟರ್, ಮುರುಗೇಶ ನಿರಾಣಿ, ಗೋವಿಂದ ಕಾರಜೋಳ್, ಅರವಿಂದ ಲಿಂಬಾವಳಿ, ಪಿ.ಸಿ.ಗದ್ದಿಗೌಡರ್, ಪ್ರಭಾಕರ್ ಕೋರೆ.
  • ರಾಮನಗರ: ಡಿ.ವಿ.ಸದಾನಂದಗೌಡ, ಸಿ.ಪಿ.ಯೋಗೇಶ್ವರ್, ಮುನಿರಾಜು ಗೌಡ,  ಆನೇಕಲ್​ ನಾರಾಯಣಸ್ವಾಮಿ.