ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬಾಗಲಕೋಟೆ: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸ್ಥಾನಮಾನ ನೀಡಿದ ಹಿನ್ನೆಲೆ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಸಂಭ್ರಮಾಚರಣೆ ನಡೆಸಿದರು.

ಮೆರವಣಿಗೆಯಲ್ಲಿ ನಗರದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರ ಜಯ ಘೊಷಣೆಗಳು ಕೂಗಿದರಲ್ಲದೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದವರಿಗೆ ಸಾಂವಿಧಾನಿಕ ಮಾನ್ಯತೆ ನೀಡಿ ಐತಿಹಾಸಿಕ ಮಸೂದೆ ಪಾಸು ಮಾಡಿದ್ದಾರೆ. ತನ್ಮೂಲಕ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸಾಮಾಜಿಕ ನ್ಯಾಯವನ್ನು ಕಾನೂನಾತ್ಮಕವಾಗಿ ಒದಗಿಸಿದ್ದಾರೆ ಎಂದರು.

ಮೊದಲು ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು. ಇದೀಗ ರಾಜ್ಯಸಭೆಯಲ್ಲಿ ಮಸೂದೆ ಪಾಸಾಗಿದೆ. ಹಿಂದುಳಿದ ವರ್ಗಗಳ ಜತೆಗೆಯ ಬಹುದಿನದ ಬೇಡಿಕೆ ಇದಾಗಿತ್ತು. ಕಾಂಗ್ರೆಸ್ ಪಕ್ಷದ ಕುತಂತ್ರದಿಂದ ಈ ಮಸೂದೆ ನನೆಗುದಿಗೆ ಬಿದ್ದಿತ್ತು. ಪ್ರಧಾನಿ ಮೋದಿ ಹಿಂದುಳಿದ ವರ್ಗಗಳ ಜನರ ಪರವಾಗಿದ್ದಾರೆ. ಹಿಂದುಳಿದ ವರ್ಗದವರು ಇಂದು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಬಿಜೆಪಿ ಮುಖಂಡರಾದ ರಾಜು ರೇವಣಕರ, ರಾಜು ನಾಯ್ಕರ್, ರಾಜು ಮುದೆನೂರ, ಕಿರಣ ಕೋರಿ, ಸಂಗಮೇಶ ಹಿತ್ತಲಮನಿ ಮತ್ತಿತರರಿದ್ದರು.