More

    ಹಿಮಾಚಲದಲ್ಲಿ ಕಾಂಗ್ರೆಸ್​ ಶಾಸಕರಿಂದ ಅಡ್ಡಮತದಾನ; ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಬಿಜೆಪಿ

    ಶಿಮ್ಲಾ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್​ ಅಡಳಿತವಿರುವ ಹಿಮಾಚಲಪ್ರದೇಶದಲ್ಲಿ 9 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    68 ಸದಸ್ಯಬಲದ ವಿಧಾನಸಭೆಯಲ್ಲಿ ಮೂವರು ಪಕ್ಷೇತರರು ಸೇರಿದಂತೆ 40 ಶಾಸಕರ ಬೆಂಬಲವನ್ನು ಕಾಂಗ್ರೆಸ್​ ಹೊಂದಿದೆ. ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರು ಹಾಗೂ ಮೂವರು ಪಕ್ಷೇತರರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

    40 ಶಾಸಕರನ್ನು ಹೊಂದಿದ್ದ ಕಾಂಗ್ರೆಸ್​ ಹಿರಿಯ ನಾಯಕ ಅಬಿಷೇಕ್​ ಮನು ಸಿಂಘ್ವಿ ಅವರನ್ನು ಕಣಕ್ಕಿಳಿಸಿತ್ತು. 25 ಶಾಸಕರನ್ನು ಹೊಂದಿರುವ ಬಿಜೆಪಿ ಹರ್ಷ್ ಮಹಾಜನ್ ಅವರನ್ನು ಕಣಕ್ಕಿಳಿಸಿದ್ದು, ಹಿರಿಯ ಕಾಂಗ್ರೆಸ್​ ನಾಯಕ ಅಭಿಷೇಕ್​ ಮನು ಸಿಂಘ್ವಿಗೆ ಈಗ ಸೋಲಿನ ಭೀತಿ ಶುರುವಾಗಿದೆ. ಹರ್ಷ್​ ಮಹಾಜನ್ ಅವರು ಮೂರು ಬಾರಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವರಾಗಿದ್ದು, ಅವರು ಸೆಪ್ಟೆಂಬರ್ 2022 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದರು.

    ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ; ಎಸ್​ಟಿಎಸ್​​ ರಾಜಕೀಯವಾಗಿ ಸೂಸೈಡ್​ ಮಾಡಿಕೊಂಡಿದ್ದಾರೆ ಎಂದ ಅಶೋಕ್

    ಕಾಂಗ್ರೆಸ್ ಶಾಸಕರಾದ ರಾಜೇಂದ್ರ ರಾಣಾ, ಸುಧೀರ್ ಶರ್ಮಾ, ರವಿ ಠಾಕೂರ್, ಚೈತನ್ಯ ಶರ್ಮಾ, ಇಂದ್ರ ದತ್ ಲಖನ್‌ಪಾಲ್ ಮತ್ತು ದೇವೇಂದ್ರ ಭುಟ್ಟೊ, ಆಶಿಶ್ ಶರ್ಮಾ, ಕೆಎಲ್ ಠಾಕೂರ್ ಮತ್ತು ಹೋಶಿಯಾರ್ ಸಿಂಗ್ ಬಿಜೆಪಿ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ ಮಾಡಿರುವ ಶಾಸಕರು ಎಂದು ತಿಳಿದು ಬಂದಿದೆ.

    ಇನ್ನು ಕಾಂಗ್ರೆಸ್​ ಶಾಸಕರು ಅಡ್ಡ ಮತದಾನ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಜೈರಾಮ್​ ಠಾಕೂರ್, ಹಿಮಾಚಲ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​ ಸರ್ಕಾರ ತನ್ನ ಬಹುಮತವನ್ನು ಕಳೆದುಕೊಂಡಿದೆ. ನಾಳೆ ಬಜೆಟ್ ಮಂಡನೆಯಾಗಲಿದೆ. ಇದಾದ ಬಳಿಕ ಇದರ ಬಗ್ಗೆ ಚರ್ಚಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಜೈರಾಮ್​ ಠಾಕೂರ್​ ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್​, ಕಾಂಗ್ರೆಸ್​ ಸರ್ಕಾರ ಸುಭದ್ರವಾಗಿದ್ದು ಪತನವಾಗುವ ಸಂಭವವೇ ಇಲ್ಲ. ಬಿಜೆಪಿ ನಾಯಕರು ಕಾಂಗ್ರೆಸ್​ ಶಾಸಕರಿಗೆ ಬೆದರಿಕೆ ಹಾಕಿದ್ದು, ವಿಪ್​ ಜಾರಿ ಮಾಡಿರುವ ಹೊರತಾಗಿಯೂ ಹಲವರು ಗೈರು ಹಾಜರಾಗಿದ್ದಾರೆ. ಗೈರಾಗಿರುವವರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಹೈ ಕಮಾಂಡ್​ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts