ಹಿಮಾಚಲದಲ್ಲಿ ಕಾಂಗ್ರೆಸ್​ ಶಾಸಕರಿಂದ ಅಡ್ಡಮತದಾನ; ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಬಿಜೆಪಿ

ಶಿಮ್ಲಾ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್​ ಅಡಳಿತವಿರುವ ಹಿಮಾಚಲಪ್ರದೇಶದಲ್ಲಿ 9 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 68 ಸದಸ್ಯಬಲದ ವಿಧಾನಸಭೆಯಲ್ಲಿ ಮೂವರು ಪಕ್ಷೇತರರು ಸೇರಿದಂತೆ 40 ಶಾಸಕರ ಬೆಂಬಲವನ್ನು ಕಾಂಗ್ರೆಸ್​ ಹೊಂದಿದೆ. ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರು ಹಾಗೂ ಮೂವರು ಪಕ್ಷೇತರರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. 40 ಶಾಸಕರನ್ನು ಹೊಂದಿದ್ದ ಕಾಂಗ್ರೆಸ್​ ಹಿರಿಯ ನಾಯಕ ಅಬಿಷೇಕ್​ ಮನು ಸಿಂಘ್ವಿ ಅವರನ್ನು … Continue reading ಹಿಮಾಚಲದಲ್ಲಿ ಕಾಂಗ್ರೆಸ್​ ಶಾಸಕರಿಂದ ಅಡ್ಡಮತದಾನ; ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಬಿಜೆಪಿ