More

    ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ: ಸಿಎಂ ಯಡಿಯೂರಪ್ಪ

    ಶಿವಮೊಗ್ಗ: ರಾಜ್ಯದಲ್ಲಿ ರೈತರ ಹಿತ ಕಾಯುವ ದೃಷ್ಟಿಯಿಂದ ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
    ಪೆಸಿಟ್ ಕಾಲೇಜಿನಲ್ಲಿ ಭಾನುವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕಂಕಣಬದ್ಧವಾಗಿದೆ ಎಂದರು.
    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 140ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇದೆ. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಗೆಲುವಿಗೆ ಯೋಜನೆ ರೂಪಿಸಬೇಕಿದೆ ಎಂದರು.
    ಕರೊನಾ ನಿಯಂತ್ರಣ ಸೇರಿ ಹಲವು ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಅಗ್ರಗಣ್ಯ ನಾಯಕ ಎಂದು ಜಗತ್ತು ಒಪ್ಪಿಕೊಂಡಿದೆ ಎಂದ ಅವರು, ನಾನು ಹೋಗುವ ಎಲ್ಲ ದೇವಸ್ಥಾನಗಳಲ್ಲೂ ನರೇಂದ್ರ ಮೋದಿ ಅವರಿಗೆ ದೇವರು ಆರೊಗ್ಯ ಆಯುಷ್ಯ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಸದಾನಂದಗೌಡ, ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಮುಖಂಡರಾದ ಅರವಿಂದ ಲಿಂಬಾವಳಿ, ಅರುಣ್‌ಕುಮಾರ್, ರವಿಕುಮಾರ್, ಮಹೇಶ್ ತೆಂಗಿನಕಾಯಿ, ತುಳಿಸಿ ಮುನಿರಾಜು ಗೌಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿ ಹಲವರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts