More

    ಇಡಿ, ಐಟಿಗಳ ಮೂಲಕ ಬೆದರಿಕೆ ಒಡ್ಡಿ ಬಿಜೆಪಿ ದೇಣಿಗೆ ಸಂಗ್ರಹ: ಮಲ್ಲಿಕಾರ್ಜುನ್​ ಖರ್ಗೆ ಆರೋಪ

    ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಭಾರತದ ಚುನಾವಣಾ ಆಯೋಗ ಎಸ್‌ಬಿಐ ಯಿಂದ ಪಡೆದ ಚುನಾವಣಾ ಬಾಂಡ್‌ಗಳ ಮಾಹಿತಿಯು ಬಿಜೆಪಿ ಮುಖವಾಡವನ್ನು ಕಳಚಿದೆ ಎಂದು ಬಿಜೆಪಿ ವಿರುದ್ಧ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಬಿಜೆಪಿ-ದಳ​ ಕಾರ್ಯಕರ್ತರಿಗೆ ಗಾಳ: ಡಿಕೆ ಶಿವಕುಮಾರ್​ ಹೇಳಿದ್ದೇನು? 

    ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯು ಇ.ಡಿ. ಮತ್ತು ಐಟಿಗಳ ಮೂಲಕ ಬೆದರಿಕೆ ಒಡ್ಡಿ ದೇಣಿಗೆ ಸಂಗ್ರಹ ಮಾಡಿರುವುದು‌ ಸ್ಪಷ್ಟವಾಗಿದೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಬೇಕು ಎಂದು ಅವರು ಆಗ್ರಹಿಸಿದರು.

    ನಾ ಖಾವೂಂಗಾ, ನಾ ಖಾನೇ ದೂಂಗಾ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಘೋಷಣೆಯನ್ನೇ ಇಟ್ಟುಕೊಂಡು ಬಿಜೆಪಿಯನ್ನು ತಿವಿದರು.
    ಇವತ್ತು ಒಂದು ಮಹತ್ವದ ವಿಷಯ ದೇಶದ ಮುಂದೆ ಬಂದಿದೆ. ಎಷ್ಟೇ ತೊಂದರೆ ಆದರೂ ಸರಿ ಜನರಿಗೆ ಅದರ ಹಿಂದಿನ ಸತ್ಯ ತಿಳಿಸಬೇಕು ಎಂದು ಬಂದಿದ್ದೇವೆ. ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ಬಹಳ ಮಾತನ್ನು ಆಡುತ್ತಿದ್ದರು. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ. ಬಿಜೆಪಿ ಹೇಗೆ ಹಣ ಮಾಡಿದೆ ಎಂಬುದು ಚುನಾವಣಾ ಬಾಂಡ್ ನಿಂದ ಬಯಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

    ಜೆಪಿಯ ಅಕೌಂಟ್‌ಗಳನ್ನು ಫ್ರೀಜ್ ಮಾಡಬೇಕು: ಕಾಂಗ್ರೆಸ್ ಪಕ್ಷದ ಅಕೌಂಟ್ ನಲ್ಲಿದ್ದ ಎಲ್ಲ ಹಣವನ್ನು ಫ್ರೀಜ಼್ ಮಾಡಲಾಗಿದೆ. ಹೀಗೆ ಮಾಡಿದರೆ ನಾವು ಚುನಾವಣೆಗೆ ಹೋಗುವುದು ಹೇಗೆ? ನೀವು ದೇಣಿಗೆ ಮೂಲಕ ಸಾವಿರಾರು ಕೋಟಿ ಸಂಗ್ರಹ ಮಾಡಬಹುದು. ನಮ್ಮ ಪಕ್ಷದ ಕಾರ್ಯಕರ್ತರು ಮುಖಂಡರು, ಸಣ್ಣ ಪುಟ್ಟ ಲೀಡರ್ಸ್ ಕೊಟ್ಟಿರುವ ಹಣವನ್ನ ಫ್ರೀಜ್ ಮಾಡಿದ್ದೀರಿ ಎಂದು ಹೇಳಿದ ಖರ್ಗೆ ಅವರು, ಬಿಜೆಪಿಯ ಅಕೌಂಟ್‌ಗಳನ್ನು ಫ್ರೀಜ್ ಮಾಡಬೇಕು. ಸ್ಪೆಷಲ್ ಟೀಮ್ ಮೂಲಕ ತನಿಖೆ ನಡೆಸಬೇಕು. ದೇಣಿಗೆ ನೀಡಲು ಯಾರಾದರೂ ಹಿಂಸೆ ಕೊಟ್ಟಿದ್ದಾರಾ? ಒತ್ತಡ ಹಾಕಿದ್ದಾರಾ..? ಎಲ್ಲವನ್ನೂ ತನಿಖೆಗೆ ಒಳಪಡಿಸಬೇಕು ಎಂದು ಹೇಳಿದರು.

    ದಾಳಿಗೆ ತುತ್ತಾಗಿದ್ದರೋ ಅವರು ದೇಣಿಗೆ ನೀಡಿದ್ದಾರೆ: ಎಸ್ ಬಿಐ ನೀಡಿರುವ ಅಂಕಿ ಅಂಶಗಳ ಪ್ರಕಾರ, ಬಿಜೆಪಿ ಶೇ. 50ರಷ್ಟು ಹಣವನ್ನು ಚುನಾವಣಾ ಬಾಂಡ್ ಮೂಲಕ ಹಣ ಸಂಗ್ರಹಿಸಿದೆ. ಕಾಂಗ್ರೆಸ್ ಪಾಲು ಕೇವಲ 11% ಇದೆ. ಬಿಜೆಪಿಗೆ ಇಷ್ಟೊಂದು ಬೃಹತ್ ಮೊತ್ತದ ದೇಣಿಗೆ ಯಾಕೆ ಕೊಡಲಾಗಿದೆ? ದೇಣಿಗೆ ಕೊಟ್ಟವರು ಯಾರು..? ಎಂದು ಪ್ರಶ್ನಿಸಿದ ಅವರು, ಇದರ ಹಿಂದಿನ ಸತ್ಯ ಈಗ ಬಯಲಾಗಿದೆ. ಯಾರು ಐಟಿ, ಇಡಿ ದಾಳಿಗೆ ತುತ್ತಾಗಿದ್ದರೋ ಅವರು ದೇಣಿಗೆ ನೀಡಿದ್ದಾರೆ. ಅವರ ಮೇಲೆ ಒತ್ತಡ ಹಾಕಿ ದೇಣಿಗೆ ಸಂಗ್ರಹಿಸಲಾಗಿದೆ ಎಂದು ಆರೋಪಿಸಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡುತ್ತಿದ್ದಾರೆ: ಈ ವಿಚಾರದಲ್ಲಿ ಪ್ರಧಾನಮಂತ್ರಿಗಳು ಹೊಣೆಗಾರಿಕೆ ಹೊತ್ತುಕೊಳ್ಳಬೇಕು. ಇದು ಮೋದಿ ಸರ್ಕಾರ, ಮೋದಿ ಪಕ್ಷ ಎಂದು ಎಲ್ಲಾ ವಿಚಾರದಲ್ಲೂ ತಮ್ಮ ಹೆಸರನ್ನೇ ಬಳಸುತ್ತಾರೆ. ಮೋದಿ ಅವರು ತಮ್ಮದು 56 ಇಂಚಿನ ಎದೆ ಎಂದು ಹೇಳಿಕೊಳ್ಳುತ್ತಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ ಎಲ್ಲವೂ ತನ್ನಿಂದಲೇ ಎಂದು ಹೇಳಿಕೊಳ್ಳುತ್ತಾರೆ. ದೇಶದಲ್ಲಿ ಏನೇ ಆಗಿದ್ದರೂ ಅದು ತನ್ನಿಂದಲೇ ಎಂದು ಹೇಳುತ್ತಾರೆ. ಅವರ ಪ್ರಕಾರ 2014ರ ನಂತರವಷ್ಟೇ ದೇಶ ಸ್ವಾತಂತ್ರ್ಯ ಪಡೆದಿದೆ ಎನ್ನುವಂತೆ ಬಿಂಬಿಸುತ್ತಾರೆ. ಮೋದಿ ಅವರು ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದ್ದಾರೆ. ಜನರ ಮೇಲೆ ಒತ್ತಡ ಹಾಕಿ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷಗಳು ಇರಲೇಬಾರದು ಎಂಬ ಮನಸ್ಥಿತಿಯಲ್ಲಿ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ.

    ಪಾಕ್‌ ಆಟಗಾರರು ಐಪಿಎಲ್‌ ಆಡ್ಬೇಕಂತೆ…! ಸಖತ್ ಟಾಂಗ್​ ಕೊಟ್ಟ ಹರ್ಭಜನ್‌ ಸಿಂಗ್‌

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts