More

    ಕಾಡುಗೊಲ್ಲರ ಅಭಿವೃದ್ಧಿಗೆ ಬಿಜೆಪಿ ಬದ್ಧ

    ಪಟ್ಟನಾಯಕನಹಳ್ಳಿ: ಕಾಡುಗೊಲ್ಲ ಸಮುದಾಯವನ್ನು ಸವಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡಿ ಶಾಸಕಿಯನ್ನಾಗಿ ವಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಹಿರಿಯೂರು ಶಾಸಕಿ ಪೂರ್ಣಿವಾ ಹೇಳಿದರು.

    ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಚಂಗಾವರದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ವಾತನಾಡಿದರು. ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಕಾಡುಗೊಲ್ಲ ಮತ್ತು ಅಲೆವಾರಿಗಳಿಗೆ ವಸತಿ ಸೌಲಭ್ಯ ನೀಡುವಲ್ಲಿ ವಿಫಲವಾಗಿತ್ತು. ರಾಜ್ಯಕ್ಕೆ 50 ಸಾವಿರ ಮನೆ ಜತೆಗೆ ಕ್ಷೇತ್ರಕ್ಕೆ 2500 ಮನೆ ಮಂಜೂರು ವಾಡಿ ಬಡವರಿಗೆ ಸೂರು ಕಲ್ಪಿಸುವಂತ ಕಾರ್ಯ ಬಿಜೆಪಿ ಸರ್ಕಾರ ವಾಡಿದೆ. ಶಾಸಕಿಯಾಗಿ ಜಯಗಳಿಸಲು ವಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಸಹಕಾರವಿದ್ದು, ಅವರ ಋಣ ತೀರಿಸುವ ಉದ್ದೇಶದಿಂದ ಕಾಡುಗೊಲ್ಲ ಸಮುದಾಯದವರು ಡಾ.ಸಿ.ಎಂ.ರಾಜೇಶ್‌ಗೌಡಗೆ ಬೆಂಬಲಿಸಬೇಕು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ವಾಡಿರುವ ಸಿಎಂ ಹೆಚ್ಚು ಅನುದಾನ ನೀಡಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದಾರೆ ಎಂದರು.

    ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾತನಾಡಿ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸುವಾಗ ಕಾರ್ಯಕರ್ತರ ಉತ್ಸಾಹ ಹಾಗೂ ಬಿಜೆಪಿ ಶಕ್ತಿ ಪ್ರದರ್ಶನವು ಕಾಂಗ್ರೆಸ್ ಮತ್ತು ಜೆಡಿಎಸ್ ನಿದ್ದೆಗೆಡಿಸಿದೆ. ಇಲ್ಲಿನ ಜನ ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದು, ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದರು.

    ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜಾರಿಗೊಳಿಸಿದ ಭಾಗ್ಯಲಕ್ಷ್ಮೀ ಯೋಜನೆ ಲಕ್ಷಾಂತರ ಹೆಣ್ಣು ಮಕ್ಕಳ ಬಾಳಿನಲ್ಲಿ ನೆಮ್ಮದಿ ಮೂಡಿಸಲಿದೆ. ಬಿಜೆಪಿ ಅಭ್ಯರ್ಥಿ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ ಎಂದರು.
    ಕಾಂಗ್ರೆಸ್ ಮತ್ತು ಜೆಡಿಎಸ್‌ನ ನೂರಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್‌ಗೌಡ, ಶಾಸಕ ಜ್ಯೋತಿಗಣೇಶ್, ವಾಜಿ ಶಾಸಕ ಸುರೇಶ್‌ಗೌಡ, ಮುಖಂಡರಾದ ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡ, ಚಂಗಾವರ ವಾರಣ್ಣ, ಎಪಿಎಂಸಿ ವಾಜಿ ಅಧ್ಯಕ್ಷ ನರಸಿಂಹೇಗೌಡ, ಕಾಡುಗೊಲ್ಲ ಮುಖಂಡರಾದ ಕೊಟ್ಟಿ ನಾಗಭೂಷಣ್, ತಿಪ್ಪೇಸ್ವಾಮಿ, ಬಾಲೇಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts