More

    ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಷಡ್ಯಂತ್ರ

    ಚಿಕ್ಕಮಗಳೂರು: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಗಾಂಧಿ ಉದ್ಯಾನದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಸಿದರು.

    ಚಿಕ್ಕಮಗಳೂರು: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಗಾಂಧಿ ಉದ್ಯಾನದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಸಿದರು.
    ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿ ದೇಶದನ ಜನರ ಪ್ರೀತಿ, ವಿಶ್ವಾಸಗಳಿಸಿದ್ದಾರೆ. ಕಾಂಗ್ರೆಸ್ ಪರ ವಾತಾವರಣ ಸೃಷ್ಟಿಯಾಗಿದ್ದು ಇದರಿಂದ ಭಯಗೊಂಡಿರುವ ಬಿಜೆಪಿ ಸರ್ಕಾರ ರಾಹುಲ್ ಗಾಂಧಿ ಅವರನ್ನು ಸಂಸದ ಸದಸ್ಯ ಸ್ಥಾನದಿಂದ ಅಮಾನತುಗೊಳಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮತ್ ಆರೋಪಿಸಿದರು.
    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ, ಆರೋಪಗಳು ಸಾಮಾನ್ಯ. ಬಿಜೆಪಿ ಮುಖಂಡರು ರಾಹುಲ್ ಗಾಂಧಿ ಅವರನ್ನು ಟೀಕಿಸಿಲ್ಲವೇ? 9 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಅಲ್ಲಿಂದ ಈತನಕ ಜನವಿರೋಧಿ ನೀತಿಗಳನ್ನೇ ಅನುಸರಿಸುತ್ತಿದೆ. ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಇದರಿಂದ ಬೇಸತ್ತಿರುವ ಬಿಜೆಪಿ ಮುಖಂಡರು ನಮ್ಮ ಮುಖಂಡರ ವರ್ಚಸ್ಸು ಕುಗ್ಗಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
    ಪ್ರತಿ ಹಂತದಲ್ಲೂ ರಾಹುಲ್‌ಗಾಂಧಿ ಅವರು ನಿರಂತರವಾಗಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಇದನ್ನು ಸಹಿಸದೆ ಬಿಜೆಪಿ ಕೇಂದ್ರದಲ್ಲಿ ಪಿತೂರಿ ರಾಜಕಾರಣ ಮಾಡುತ್ತಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದುರುದ್ದೇಶದಿಂದ ರಾಹುಲ್ ಗಾಂಧಿ ಅನರ್ಹತೆಗೆ ಬಿಜೆಪಿ ಷಡ್ಯಂತ್ರ ಮಾಡಿದೆ ಎಂದು ಆರೋಪಿಸಿದರು.
    ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಮೂರ್ತಿ, ರೇಖಾ ಹುಲಿಯಪ್ಪ ಗೌಡ, ಕೆ.ಮಹಮ್ಮದ್, ಮಲ್ಲೇಶ್ ಸ್ವಾಮಿ, ಹಿರೇಮಗಳೂರು ರಾಮಚಂದ್ರ, ಕೆ.ಭರತ್, ಮನೋಜ್, ಪುಟ್ಟೆಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts