More

    ಬಿಜೆಪಿ ನಾಯಕರಿಂದ ಸಂವಿಧಾನಕ್ಕೆ ಅಪಚಾರ

    ರಾಯಚೂರು: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ. ಕಾಂಗ್ರೆಸ್‌ನಿಂದ ಅಂಬೇಡ್ಕರ್‌ಗೆ ಅಪಮಾನವಾಗಿದೆ ಎಂದು ಬಿಜೆಪಿ ನಾಯಕರು ಇತಿಹಾಸವನ್ನು ತಿಳಿಯದೆ ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸಹ ಕಾರ್ಯದರ್ಶಿ ಕೆ.ಇ.ಕುಮಾರ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದರು. ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುವ ಮಾತನಾಡಿದರೆ, ಶಾಸಕ ಸಿ.ಟಿ.ರವಿ ಸಂವಿಧಾನ ಅಂಗೀಕರಿಸುವಾಗ ನಾನಿದ್ದರೆ ಒಪ್ಪುತ್ತಿರಲಿಲ್ಲ ಎಂದು ಹೇಳುವ ಮೂಲಕ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದರು.

    ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ನಾಯಕರು ಗೌರವದಿಂದ ನಡೆದುಕೊಂಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಪಕ್ಷವನ್ನು ಮುನ್ನಡೆಸಲಾಗುತ್ತಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಹಾಗೂ ರಕ್ಷಣೆ ಮಾಡುವ ಕೆಲಸ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ.

    ಅಂಬೇಡ್ಕರ್ ಬೇರೆ ಪಕ್ಷದಿಂದ ಸ್ಪರ್ಧಿಸಿದಾಗ ಅನಿವಾರ್ಯವಾಗಿ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಪಕ್ಷವನ್ನು ಗೆಲ್ಲಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ. ಜನರ ತೆರಿಗೆಯಿಂದ ಆರಂಭಿಸಿದ್ದ ಬಿಎಸ್‌ಎನ್‌ಎಲ್, ಬಂದರು, ವಿಮಾನ ನಿಲ್ದಾಣಗಳನ್ನು ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿ ಬಗ್ಗೆ ಬಿಜೆಪಿ ನಾಯಕರು ಧ್ವನಿ ಎತ್ತಬೇಕು ಎಂದು ಕೆ.ಇ.ಕುಮಾರ ಒತ್ತಾಯಿಸಿದರು. ಪ್ರಮುಖರಾದ ಮಲ್ಲೇಶ ಕೊಲಿಮಿ, ಎಚ್.ಮಲ್ಲಿಕಾರ್ಜುನ, ಶಾಲಂ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts