More

    ಬಿಜೆಪಿ ದಲಿತರ ವಿರೋಧಿ ಅಲ್ಲ

    ಚಿಕ್ಕೋಡಿ: ಬಿಜೆಪಿ ದಲಿತ ವಿರೋಧಿಯಲ್ಲ. ದಲಿತರೆಲ್ಲ ಸಂಗಮವಾಗುತ್ತಿರುವ ಏಕೈಕ ರಾಜಕೀಯ ಪಕ್ಷವಾಗಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಎಸ್‌ಸಿ ಮೊರ್ಚಾದ ಪದಾಧಿಕಾರಿಗಳ ಸಂಘಟನಾತ್ಮಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ದಲಿತರು ಕಾಂಗ್ರೆಸ್‌ನಿಂದ ದೂರಾಗುತ್ತಿದ್ದಾರೆ. ಕಾಂಗ್ರೆಸ್, ದಲಿತರನ್ನು ಕೇವಲ ಮತ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್, ಧರ್ಮಗಳನ್ನು ಒಡೆಯುವ ಕೆಲಸ ಮಾಡಿರುವುದರಿಂದ ಕಳೆದ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಕೋಮುವಾದಿ ಎಂದು ಹೇಳುವ ನೈತಿಕತೆ ಕಾಂಗ್ರೇಸ್‌ನವರಿಗಿಲ್ಲಘಿ. ಬಿಜೆಪಿ ಎಂದಿಗೂ ದಲಿತರ ವಿರೋಧಿ ನೀತಿ ಜಾರಿಗೆ ತಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ತೆಗೆಯಬೇಕಾಗಿದ್ದರೆ ಇದೇ ವರ್ಷ ಜ. 5ರಂದು 10 ವರ್ಷ ಮೀಸಲಾತಿಯನ್ನು ಏಕೆ ಮುಂದುವರಿಸುತ್ತಿದ್ದರು ಎಂದು ಪ್ರಶ್ನಿಸಿದರು. ಮೀಸಲಾತಿ ತೆಗೆದುಹಾಕಬಹುದಿತ್ತು. ಆದರೆ, ಯಾವುದೇ ಕಾರಣಕ್ಕೂ ಸಂವಿಧಾನವನ್ನು ಬದಲಾಯಿಸುವುದಿಲ್ಲ ಎಂದು ಪ್ರಧಾನಿ ಮೋದಿ ಅವರು ವಿವಿಧ ಸಭೆಯಲ್ಲಿ 100 ಬಾರಿ ಹೇಳಿದ್ದಾರೆ. ಈ ದೇಶದ ಸಂವಿಧಾನದಿಂದ ನನ್ನಂತಹ ಸಾಮಾನ್ಯ ಮನುಷ್ಯ ದೇಶದ ಪ್ರಧಾನಿಯಾಗಲು ಸಾಧ್ಯ ಎಂದು ಪ್ರಧಾನಿ ಅವರು ಹೇಳಿದ್ದಾರೆ. ಕಾಂಗ್ರೆಸ್‌ನವರು ಸಂವಿಧಾನ ಬದಲಾವಣೆ ಮಾಡುತ್ತಾರೆಂದು ವದಂತಿ ಮಾಡುವ ಮೂಲಕ ದಲಿತರಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ಕಾಂಗ್ರೆಸ್, ನಮ್ಮ ಸಮುದಾಯದ ಒಂದಿಬ್ಬರು ನಾಯಕರನ್ನು ತೋರಿಸಿ ಮತ ಗಿಟ್ಟಿಸಿಕೊಂಡು ಅಧಿಕಾರ ನಡೆಸುತ್ತ ಬಂದಿದೆ ಎಂದು ಆರೋಪಿಸಿದರು.

    ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತನಾಳ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಗಟ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

    ಚಿಕ್ಕೋಡಿ ಜಿಲ್ಲೆ ಎಸ್‌ಸಿ ಮೋರ್ಚಾ ಅಧ್ಯಕ್ಷ ಸದಾಶಿವ ಹುಂಜ್ಯಾಗೋಳ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್ ವಾಸಿಸುವ ಮನೆಯನ್ನು ಪ್ರಧಾನಿ ಅವರು ಪ್ರವಾಸಿ ಸ್ಥಾನವನ್ನಾಗಿ ಮಾಡಿದ್ದಾರೆ ಎಂದರು. ಬಿಜಿಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ. ರಾಜೇಶ ನೇರ್ಲಿ, ರಾವಬಹದ್ದೂರ ಕದಂ, ಸತೀಶ ಅಪ್ಪಾಜಿಗೋಳ, ಅಪ್ಪಾಸಾಹೇಬ ಚೌಗಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts