More

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಸ್.ಅಂಗಾರ

    ಪುತ್ತೂರು: ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

    ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಜೋರಾಗಿದ್ದು, ಇದೀಗ ಮತ್ತೋರ್ವ ಹಿರಿಯ ನಾಯಕ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

    ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮಮಂದಿರ ರಕ್ಷಣೆಗೆ ಆಧುನಿಕ ತಂತ್ರಜ್ಞಾನ; 77 ಕೋಟಿ ರೂ. ಖರ್ಚು !

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು’ ಎಂದು ಹೇಳಿದರು. ‘ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಹೇಳಿದ್ದಾರೆ.

    ಇದನ್ನೂ ಓದಿ: ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!
    ಆರು ಬಾರಿ ಶಾಸಕರಾಗಿದ್ದ ಎಸ್.ಅಂಗಾರ. ಈ ಬಾರಿ ಅಂಗಾರ ಬದಲು ಆದಿ ದ್ರಾವಿಡ ಸಮಾಜದ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

    ಪಂಜಾಬ್‌ ಸೇನಾ ನೆಲೆ ಪ್ರವೇಶಕ್ಕೆ ಉಗ್ರರ ಯತ್ನ: ನಾಲ್ವರನ್ನು ಹೊಡೆದುರುಳಿಸಿದ ಸೇನೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts