

ಪುತ್ತೂರು: ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಜೋರಾಗಿದ್ದು, ಇದೀಗ ಮತ್ತೋರ್ವ ಹಿರಿಯ ನಾಯಕ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು’ ಎಂದು ಹೇಳಿದರು. ‘ನಾನು ಇನ್ನು ರಾಜಕಾರಣದಲ್ಲಿ ಇರಲ್ಲ. ಚುನಾವಣಾ ಪ್ರಚಾರವನ್ನೂ ಮಾಡುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಹೇಳಿದ್ದಾರೆ.
ಆರು ಬಾರಿ ಶಾಸಕರಾಗಿದ್ದ ಎಸ್.ಅಂಗಾರ. ಈ ಬಾರಿ ಅಂಗಾರ ಬದಲು ಆದಿ ದ್ರಾವಿಡ ಸಮಾಜದ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.