Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಅಮಿತ್ ಷಾ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್ ತಡೆ, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ

Thursday, 06.12.2018, 7:43 PM       No Comments

ಕೋಲ್ಕತಾ: ಡಿ. 7ರಂದು ನಡೆಯಬೇಕಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ತಡೆ ನೀಡಿದ್ದು, ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ಕೋಮು ಸಂಘರ್ಷಕ್ಕೆ ಅನುವು ಮಾಡಿಕೊಡುವ ಹಿನ್ನೆಲೆಯಲ್ಲಿ ಮಮತ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರ ಯಾತ್ರೆಗೆ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ಕೋಲ್ಕತಾ ಹೈಕೋರ್ಟ್‌ಗೆ ಯಾತ್ರೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಬಂಗಾಳದ ಕೊಚ್ಬೀಹಾರ್‌ನಿಂದ ಬಿಜೆಪಿ ನಾಳೆ ಯಾತ್ರೆಯನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜಿಪಿಯ ಉಪಾಧ್ಯಕ್ಷ ಜೈ ಪ್ರಕಾಶ್‌ ಮಜುಮ್ದಾರ್‌, ನಾಳೆ ಮುಂಜಾನೆ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಹೋಗಲಿದ್ದೇವೆ. ಭಾರತೀಯ ಸಂವಿಧಾನದಡಿಯಲ್ಲಿ ಯಾವುದೇ ಶಾಂತಿಯುತ ಚಳುವಳಿಗೆ ಅನುಮತಿ ನೀಡಬೇಕೆಂದು ನ್ಯಾಯವನ್ನು ಕೇಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕಿಶೋರ್ ದತ್ತಾ ಅವರು, ಕೋಮುಗಲಭೆ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಅವರ ರಥಯಾತ್ರೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಧೀಶರು ಅಹಿತಕರ ಘಟನೆ ನಡೆದರೆ ಯಾರು ಜಾವಾಬ್ದಾರರು ಎಂದು ಬಿಜೆಪಿ ಪರ ವಕೀಲ ಅನಿದ್ಯಾ ಮಿತ್ರಾ ಅವರನ್ನು ಪ್ರಶ್ನಿಸಿದಾಗ, ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದರು.

ರಥ ಯಾತ್ರೆಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೀರ್ಪು ಪ್ರಶ್ನಿಸಿ ವಿಭಾಗೀಯ ಪೀಠದ ಮೊರೆ ಹೋಗಲು ನಿರ್ಧರಿಸಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ರಥ ಯಾತ್ರೆಯು 42 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿತ್ತು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 40 ಕ್ಷೇತ್ರಗಳ ಪೈಕಿ 22 ಸೀಟುಗಳ ಮೇಲೆ ಕಣ್ಣಿಟ್ಟಿರುವ ಷಾ, ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಅಸನ್ಸಾಲ್‌ ಮತ್ತು ಡಾರ್ಜಲಿಂಗ್‌ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಇದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top