ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು ಆಯೋಜಿಸಿದ್ದ ಮೈಸೂರು ಪಾದಯಾತ್ರೆ ಸಮಾರೋಪ ಬೆನ್ನಲ್ಲೇ ಪಾದಯಾತ್ರೆಯಿಂದ ದೂರ ಉಳಿದಿದ್ದ ಕಮಲ ಪಾಳಯದ ಕೆಲ ನಾಯಕರು ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಭಾನುವಾರ ಪ್ರತ್ಯೇಕ ಸಭೆ ನಡೆಸಿರುವುದು ಸಂಚಲನ ಮೂಡಿಸಿದೆ.
ಶಾಸಕರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಜಿ.ಎಂ.ಸಿದ್ದೇಶ್ವರ, ಪ್ರತಾಪಸಿಂಹ ಹಾಗೂ ಬಿಎಸ್‌ವೈ ಆಪ್ತ ಎನ್.ಆರ್. ಸಂತೋಷ, ಕುಮಾರ ಬಂಗಾರಪ್ಪ ಮತ್ತಿತರ ನಾಯಕರು ಪಾಲ್ಗೊಂಡಿದ್ದರು. ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡ ಬಿಜೆಪಿಯ ಈ ನಾಯಕರು, ಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣ ವಿರೋಧಿಸಿ ಕೂಡಲಸಂಗಮದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸುವ ಕುರಿತು ಚರ್ಚಿಸಿದ್ದಾರೆ. ದೀಪಾವಳಿ ಬಳಿಕ ಅಥವಾ ಸೆಪ್ಟೆಂಬರ್ 17ರಂದು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಹೂರ್ತ ನಿಗದಿಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾಯಕರೆಲ್ಲರೂ ಒಕ್ಕೋರಲಿನಿಂದ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.
ಸಭೆ ಮಧ್ಯೆ ಹೊರಗೆ ಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅರವಿಂದ ಲಿಂಬಾವಳಿ, ಇದು ಬಿಜೆಪಿ ಭಿನ್ನಮತ ಅಲ್ಲ ಅಥವಾ ಭಿನ್ನಮತ ನಾಯಕರ ಸಭೆಯೂ ಅಲ್ಲ. ವಾಲ್ಮೀಕಿ ನಿಗಮ ಹಗರಣ ಹಾಗೂ ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದು ಬಿಜೆಪಿ ಬಲವರ್ಧನೆ ದೃಷ್ಟಿಯಿಂದ ಮಾಡಿರುವ ಸಭೆ. ದೋಷ ಸರಿಪಡಿಸಿಕೊಂಡು ಪಕ್ಷ ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಪಕ್ಷವಾದರೂ ಭಿನ್ನಮತ:
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಮನೆಯೊಂದು ಮೂರು ಬಾಗಿಲು ಅನ್ನುವ ಪರಿಸ್ಥಿತಿ ಇತ್ತು. ಈಗ ವಿಪಕ್ಷ ಸ್ಥಾನದಲ್ಲಿದ್ದರೂ ಅದೇ ಪರಿಸ್ಥಿತಿ ಮುಂದುವರಿದಿದೆ. ಅದರಲ್ಲೂ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಬೆಳಗಾವಿಯಿಂದಲೇ ಬಿಜೆಪಿ ಭಿನ್ನಮತ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಾವು ಒಪ್ಪುವುದಿಲ್ಲ ಎಂದಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ರಮೇಶ ಜಾರಕಿಹೊಳಿ ಅವರ ಮಾತುಗಳಿಗೆ ಭಾನುವಾರ ಬೆಳಗಾವಿಯಲ್ಲಿ ನಡೆದ ಸಭೆ ಮತ್ತಷ್ಟು ಪುಷ್ಟಿ ನೀಡಿದೆ.
ಅರಂವಿಂದ ಲಿಂಬಾವಳಿ ಪ್ರತಿಕ್ರಿಯೆ:
ಸೆಭೆಯಲ್ಲಿ ಚರ್ಚಿತ ಸಂಗತಿಗಳನ್ನು ರಾಷ್ಟ್ರೀಯ ನಾಯಕರಿಗೆ ತಿಳಿಸುತ್ತೇವೆ. ಮುಂಬರುವ ದಿನಗಳಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಚರ್ಚಿಸಿದ್ದು, ವ್ಯವಸ್ಥಿತವಾಗಿ ಹೋರಾಟ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ ಎಂದರು.