More

    ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎನ್.ಇಂದ್ರೇಶ್ ಟೀಕೆ

    ಮಂಡ್ಯ: ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಕಂಡುಬಂದಿದೆ. ಮಾತ್ರವಲ್ಲದೆ ಜನರನ್ನು ಭಯದ ವಾತಾವರಣದಲ್ಲಿ ಬದುವ ಧಾರುಣ ಸ್ಥಿತಿಗೆ ರಾಜ್ಯ ಸರ್ಕಾರ ತಲುಪಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎಸ್.ಎನ್.ಇಂದ್ರೇಶ್ ಆರೋಪಿಸಿದ್ದಾರೆ.
    ಆಡಳಿತ ಮತ್ತು ಕಾನೂನು ಸುವ್ಯವಸ್ಥೆಯನ್ನು ಹೇಗೆ ಹತೋಟಿಗೆ ತರಬೇಕು ಎಂಬ ಸಾಮರ್ಥ್ಯವೇ ಇಲ್ಲದ ಗೃಹ ಸಚಿವರು ಇದ್ದಾರೆ. ಪರಿಸ್ಥಿತಿಯನ್ನು ಅವಲೋಕನ ಮಾಡಲೂ ಅಸಮರ್ಥರಾಗಿರುವ ರಾಜ್ಯ ಸರ್ಕಾರ ಇರುವ ಕಾರಣಕ್ಕಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಕಂಡುಬಂದಿದೆ. ಪ್ರತಿಯೊಂದರಲ್ಲೂ ರಾಜಕೀಯ ಲಾಭದ ಹುನ್ನಾರ, ಮತಬ್ಯಾಂಕ್ ಸಂರಕ್ಷಣೆ ಕಾರಣಕ್ಕೆ ಹಿಂದೆ ಕಾನೂನು ಸುವ್ಯವಸ್ಥೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಇಂದು ಗೂಂಡಾ ರಾಜ್ಯವಾಗಿ ಮತ್ತು ಕೊಲೆಗಡುಕರ ರಾಜ್ಯವಾಗಿ ಪರಿವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.
    ಸಿಟಿ ಕ್ರೈಂ ಮತ್ತು ರಾಷ್ಟ್ರೀಯ ಕ್ರೈಂ ಬ್ಯೂರೋ ಪ್ರಕಾರ 11 ತಿಂಗಳಲ್ಲಿ ಶೇ.60ಕ್ಕಿಂತ ಹೆಚ್ಚು ಕ್ರಿಮಿನಲ್ ಚಟುವಟಿಕೆ ಹೆಚ್ಚಾಗಿರುವುದು ಕಂಡುಬಂದಿದೆ. ವಿಶೇಷವಾಗಿ ಮಹಿಳೆಯರ ಮೇಲಿನ ಅಮಾನುಷ ಕೃತ್ಯಗಳು ಹೆಚ್ಚಾಗಿವೆ. ಹುಬ್ಬಳ್ಳಿಯ ಅಂಜಲಿಯ ಹತ್ಯಾ ಪ್ರಕರಣ, ಅದಕ್ಕೂ ಮೊದಲು ನೇಹಾ ಪ್ರಕರಣ, ಬೆಳಗಾವಿಯಲ್ಲಿ ನಡೆದ ದಲಿತ ಮಹಿಳೆಯ ವಿವಸ್ತ್ರಗೊಳಿಸಿದ ಅಮಾನವೀಯ ಘಟನೆ, ರೊಟ್ಟಿ ಕೇಳಿದ ದಲಿತ ಯುವಕನ ಹತ್ಯೆ, ಮತ್ತೊಂದೆಡೆ ಮತಾಂಧ ಶಕ್ತಿಗಳು ಸ್ವಚ್ಚಂದವಾಗಿ ವಿಜೃಂಭಿಸುತ್ತಿದ್ದರೆ, ಇನ್ನೊಂದು ಕಡೆ ಕೊಲೆಗಡುಕರು, ಗುಂಡಾ ರಾಜ್ಯವಾಗಿ ಕರ್ನಾಟವನ್ನು ಪರಿವರ್ತನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕೈಯ್ಯಲ್ಲಿ ರಾಜ್ಯಸುರಕ್ಷಿತವಾಗಿಲ್ಲ. ಅಪಾಯಕಾರಿ ಸ್ಥಿತಿಯಲ್ಲಿದೆ ಎಂಬುದನ್ನು ಇದಕ್ಕಿಂತಲೂ ಸಾಕ್ಷಿ ಬೇಕಾ?. ರಾಜ್ಯ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಒಬ್ಬ ಅಸಮರ್ಥ ರಾಜ್ಯದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts