More

    ಸರ್ಕಾರದ ಯೋಜನೆಗಳ ಮಾಹಿತಿ ತಿಳಿಸಿ

    ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುರುವಾರ ಮಂಡಿಸಲಿರುವ ಬಜೆಟ್ನಲ್ಲಿನ ಜನಪ್ರಿಯ ಕಾರ್ಯಕ್ರಮಗಳನ್ನು ಜಿಲ್ಲೆಯ ಜನರ ಮನೆ ಬಾಗಿಲಿಗೆ ತಲುಪಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್ ಸಲಹೆ ನೀಡಿದರು.

    ಬುಧವಾರ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುವ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರಷ್ಟೆ ತಿಳಿದುಕೊಂಡರೆ ಸಾಲದು. ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರು ತಿಳಿ ಹೇಳಬೇಕು ಎಂದರು.

    ಈ ಹಿನ್ನೆಲೆಯಲ್ಲಿ 7ರಂದು ಪಕ್ಷದ ಕಚೇರಿಯಲ್ಲಿ ಬಜೆಟ್ ವಿಶ್ಲೇಷಣೆ, ಅದರೊಳಗಿನ ಅಂಶಗಳ ಕುರಿತಾಗಿ ಕಾಯರ್ಾಗಾರ ಏರ್ಪಡಿಸಲಾಗಿದೆ. ಪಕ್ಷದ ವಿಶ್ವನಾಥ ಭಟ್ ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದು ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಇಲ್ಲಿ ತಿಳಿದುಕೊಂಡು ಹೋದ ಮಾಹಿತಿ ಜನರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ತಿಳಿಸಿದರು.

    ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಮಾತನಾಡಿ, ಬಜೆಟ್ನಲ್ಲಿ ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಬಗ್ಗೆ ಈಗಾಗಲೇ ಬೆಂಗಳೂರಿನಲ್ಲಿ ಜಿಲ್ಲಾ ಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಪಕ್ಷದ ಶಾಸಕರ, ಸಂಸದರ ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಿದರು.

    ಚೇಂಬರ್ ಆಫ್ ಕಾರ್ಮಸ್ ಜಿಲ್ಲಾಧ್ಯಕ್ಷ ಹನುಮಾನದಾಸ್ ಮುಂದಡಾ, ನಗರಸಭೆ ಸದಸ್ಯೆ ಲಲಿತಾ ಅನಪುರ, ಅಶೋಕ ಜೈನ್, ಗೋಪಾಲ ದಾಸನಕೇರಿ, ಸುನೀತಾ ಚವ್ಹಾಣ್, ವೀಣಾ ಮೋದಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts