ಸಿನಿಮಾ

ಬೆಂ. ದಕ್ಷಿಣದಲ್ಲಿ ಬಿಜೆಪಿ ಅಬ್ಬರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಪರ ವಾದ ಸಾಕಷ್ಟು ಯೋಜನೆ ಹಾಗೂ ಅಭಿವೃದ್ಧಿ ಕಾರ್ಯ ಗಳನ್ನು ಮಾಡಲಾಗಿದ್ದು, ಇದನ್ನು ಮನೆಮನೆಗೆ ತಲುಪಿಸುವ ಹೊಣೆ ಕಾರ್ಯಕರ್ತರ ಮೇಲಿದೆ ಎಂದು ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನ ಕುಂಟೆ ವಾರ್ಡ್‌ನ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ಹಾಗೂ ಕೊತ್ತನೂರಿನ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ದೇವರ ಆಶೀರ್ವಾದ ಪಡೆದು ಕಾಲ್ನಡಿಗೆಯಲ್ಲಿ ಮುಖಂಡರು, ಕಾರ್ಯಕರ್ತರ ಜತೆ ಸಾಗಿ ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಕೃಷ್ಣಪ್ಪ, ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ. ಬಿಜೆಪಿಯ ಗೆಲುವು ಅಭಿವೃದ್ಧಿಯ ಗೆಲುವು, ಮುಖಂಡರು ಹಾಗೂ ಕಾರ್ಯಕರ್ತರ ಗೆಲುವಾ ಗಲಿದೆ. ಇಲ್ಲಸಲ್ಲದ ಆರೋಪ ಮಾಡುತ್ತ ಜನರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ಅನ್ಯಪಕ್ಷಗಳು ನಿರತವಾಗಿವೆ ಎಂದರು.

ಮತದಾರರು ಕಾಂಗ್ರೆಸ್‌ ಭರವಸೆ, ಗ್ಯಾರಂಟಿ ಕಾರ್ಡ್ ಹಾಗೂ ಆಮಿಷಗಳಿಗೆ ಬಗ್ಗುವುದಿಲ್ಲ. ಕ್ಷೇತ್ರ ವ್ಯಾಪ್ತಿಯಲ್ಲಿ ಕಾವೇರಿ ನೀರಿನ ಪೂರೈಕೆ ಸೇರಿ ಹಲವು ಮೂಲಸೌಕರ್ಯ ಕಲ್ಪಿಸಲಾಗಿದೆ. ಮತ್ತಷ್ಟು ಅಭಿವೃದ್ಧಿಯ ಆಶಯ ಪೂರೈಸಲು ಜನರು ಮತ್ತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೆಂ. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂ. ಕೃಷ್ಣಪ್ಪ ಕೋಣನಕುಂಟೆ ವಾರ್ಡ್‌ನ ಹಲವೆಡೆ ಬಿರುಸಿನ ಪ್ರಚಾರ ನಡೆಸಿ, ಜನರ ಕುಂದು- ಕೊರತೆಗಳನ್ನು ಆಲಿಸಿದರು. ಪಾಲಿಕೆ ಮಾಜಿ ಸದಸ್ಯ ಶಶಿರೇಖಾ ಜಯರಾಮ್, ಮುಖಂಡರಾದ ಜಯರಾಮ್, ಸುಬ್ರಮಣಿ, ನಾರಾಯಣ್, ಬಿಜೆಪಿ ಮಂಡಲಾಧ್ಯಕ್ಷ ಕೇಶವರಾಜ್ ಇತರರಿದ್ದರು.

Latest Posts

ಲೈಫ್‌ಸ್ಟೈಲ್