More

    ಹಿರೇಕೆರೂರ ಪಪಂ ಆಡಳಿತ ಬಿಜೆಪಿ ತೆಕ್ಕೆಗೆ

    ಹಿರೇಕೆರೂರ: 2 ವರ್ಷ 3 ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು.

    ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಗುರುಶಾಂತ ಯತ್ತಿನಹಳ್ಳಿ, ಪಕ್ಷೇತರ ಸದಸ್ಯ ಬಸವರಾಜ ಕಟ್ಟಿಮನಿ ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸುಧಾ ಚಿಂದಿ, ಜೆಡಿಎಸ್ ಸದಸ್ಯೆ ಶಂಶಾದ ಕುಪ್ಪೇಲೂರ ನಾಮಪತ್ರ ಸಲ್ಲಿಸಿದ್ದರು. ಬಸವರಾಜ ಕಟ್ಟಿಮನಿ ಹಾಗೂ ಶಂಶಾದ ಕುಪ್ಪೇಲೂರ ತಮ್ಮ ಉಮೇದುವಾರಿಕೆ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸಿದರು. ಹೀಗಾಗಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

    ಚುನಾವಣಾ ಅಧಿಕಾರಿಗಳಾಗಿ ತಹಸೀಲ್ದಾರ್ ರಿಯಾಜುದ್ದಿನ್ ಬಾಗವಾನ್, ಪಪಂ ಮುಖ್ಯಾಧಿಕಾರಿ ರಾಜಾರಾಮ ಪವಾರ ಕಾರ್ಯನಿರ್ವಹಿಸಿದರು.

    ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ: ನಂತರ ಪಪಂ ಕಾರ್ಯಾಲಯದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಅಧ್ಯಕ್ಷ ಗುರುಶಾಂತ ಯತ್ತಿನಹಳ್ಳಿ ಹಾಗೂ ಉಪಾಧ್ಯಕ್ಷೆ ಸುಧಾ ಚಿಂದಿ ಅವರನ್ನು ಸನ್ಮಾನಿಸಲಾಯಿತು.

    ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಪಟ್ಟಣವನ್ನು ಎಲ್ಲ ಸದಸ್ಯರ ಸಹಕಾರದಿಂದ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

    ಸಂಸದ ಶಿವಕುಮಾರ ಮಾತನಾಡಿ, 14ನೇ ಹಣಕಾಸು ಯೋಜನೆ ಬಳಸಿಕೊಂಡು, ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದರು.

    ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಕಾರ್ಯನಿರ್ವಹಿಸಬೇಕು ಎಂದರು.

    ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಿದ್ಧರಾಜ ಕಲಕೋಟಿ, ನೂತನ ಅಧ್ಯಕ್ಷ ಗುರುಶಾಂತ ಯತ್ತಿನಹಳ್ಳಿ ಹಾಗೂ ಉಪಾಧ್ಯಕ್ಷೆ ಸುಧಾ ಚಿಂದಿ ಮಾತನಾಡಿದರು.

    ನಂತರ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ತಾಪಂ ಅಧ್ಯಕ್ಷ ರಾಜು ಬಣಕಾರ, ಡಿ.ಸಿ. ಪಾಟೀಲ, ಆರ್.ಎನ್. ಗಂಗೋಳ, ರವಿಶಂಕರ ಬಾಳಿಕಾಯಿ, ಮಹೇಶ ಗುಬ್ಬಿ, ಎಸ್.ಆರ್. ಅಂಗಡಿ, ಕರೇಗೌಡ ಸಣ್ಣಕ್ಕಿ, ಬೀರೇಶ ಹಾರ್ನಳ್ಳಿ, ರಾಜಶೇಖರ ಹಂಪಾಳಿ, ವಿ.ಎಸ್. ಪುರದ, ಶಿವಕುಮಾರ ತಿಪ್ಪಶೆಟ್ಟಿ, ಹೊನ್ನಪ್ಪ ಸಾಲಿ ಹಾಗೂ ಪಪಂ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts