More

    ಶೆಟ್ಟರ್ ಅವರ 27 ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

    ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡದ್ದರಿಂದ ಪಕ್ಷವನ್ನು ತೊರೆದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದನ್ನು ಬಿಜೆಪಿ ಪ್ರತಿಷ್ಠೆ ಹಾಗೂ ಸವಾಲಾಗಿ ತೆಗೆದುಕೊಂಡಿದೆ. ಮಾತ್ರವಲ್ಲ, ಅವರನನ್ನು ಸೋಲಿಸಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ, ಈಗ ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಕಾಂಗ್ರೆಸ್ ಸೇರಿ ಈ ಚುನಾವಣೆಗೆ ಟಿಕೆಟ್ ಗಿಟ್ಟಿಸಿಕೊಂಡು ಸ್ಪರ್ಧೆಗಿಳಿದಿರುವ ಶೆಟ್ಟರ್ ಅವರನ್ನು ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವರು ಸವಾಲಾಗಿ ತೆಗೆದುಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಅವರ ವಿರುದ್ಧ ಟೀಕಾಪ್ರಹಾರ ನಡೆಯುತ್ತಿದ್ದು, ಈಗ ಅವರ ಬೆಂಬಲಿಗರನ್ನು ಉಚ್ಚಾಟನೆ ಮಾಡಲಾಗಿದೆ.

    ಇದನ್ನೂ ಓದಿ: ‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

    ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇರೆಗೆ ಶೆಟ್ಟರ್​ ಅವರ 27 ಬೆಂಬಲಿಗರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಆದೇಶದ ಮೇರೆಗೆ 27 ಜನ‌ ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ ಚೌವ್ಹಾಣ್ ಆದೇಶ ಹೊರಡಿಸಿದ್ದಾರೆ.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮೀ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರ ಉಚ್ಚಾಟನೆ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ‌ ಬಿಜೆಪಿ ಆದೇಶ ಹೊರಡಿಸಿದೆ.

    ಶೆಟ್ಟರ್ ಅವರ 27 ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

    ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!

    ಸಿಂಹವನ್ನೇ ಹೋಲುವ ಕರುವಿಗೆ ಜನ್ಮ ನೀಡಿದ ಹಸು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts