More

    ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ಬಿಜೆಪಿ ವಿಫಲ

    ಸಾಗರ: ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ, ಹಿಂಸೆಯ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ಬ್ಲಾಕ್ ಕಾಂಗ್ರೆಸ್‌ನಿAದ ಉಪವಿಭಾಗಾಽಕಾರಿ ಕಚೇರಿ ಮೂಲಕ ರಾಷ್ಟçಪತಿಗೆ ಮನವಿ ಸಲ್ಲಿಸಲಾಯಿತು.

    ಮಣಿಪುರದಲ್ಲಿ ನಡೆದಿರುವುದು ಅತ್ಯಂತ ಅಮಾನವೀಯ ಘಟನೆ. ಆಡಳಿತಾರೂಢ ಬಿಜೆಪಿ ಸರ್ಕಾರ ಹಿಂಸೆಯನ್ನು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ. ಹೀಗಿದ್ದೂ ಪ್ರಧಾನ ಮಂತ್ರಿಗಳು ಮೌನವಾಗಿರುವುದನ್ನು ಕಾಂಗ್ರೆಸ್‌ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ಘಟನೆಯ ನೈತಿಕ ಹೊಣೆ ಹೊತ್ತು ಮಣಿಪುರ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಒತ್ತಾಯಿಸಿದರು.
    ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಂಗಲಾ ರಾಮಕೃಷ್ಣ ಮಾತನಾಡಿ, ಬಿಜೆಪಿ ಸರ್ಕಾರದ ಅವಽಯಲ್ಲಿ ದೇಶಾದ್ಯಂತ ಅಹಿಂಸೆ ತಾಂಡವವಾಡುತ್ತಿದೆ. ಬಿಜೆಪಿ ಸರ್ಕಾರಕ್ಕೆ ಮಹಿಳೆಯರನ್ನು ರಕ್ಷಿಸುವುದು ಬೇಕಿಲ್ಲ. ಕೇಂದ್ರ ಸರ್ಕಾರಕ್ಕೆ ಮಣಿಪುರ ಹಿಂಸೆಯನ್ನು ತಡೆಗಟ್ಟಲು ಸಾಧ್ಯವಾಗದೆ ಹೋದರೆ ಸೈನ್ಯಕ್ಕೆ ಜವಾಬ್ದಾರಿ ನೀಡಲಿ. ಕೇಂದ್ರ ಸರ್ಕಾರಕ್ಕೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದಲ್ಲಿ ರಾಜೀನಾಮೆ ಕೊಟ್ಟು ಕೆಳಗಿಳಿಯಲಿ ಎಂದು ಒತ್ತಾಯಿಸಿದ ಅವರು ರಾಷ್ಟçಪತಿಗಳು ಮಧ್ಯಪ್ರವೇಶಿಸಿ ಮಣಿಪುರದಲ್ಲಿ ನಡೆದಿರುವ ದೌರ್ಜನ್ಯದ ವಿರುದ್ಧ ಕೇಂದ್ರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.
    ಪ್ರಮುಖರಾದ ಸುರೇಶಬಾಬು, ಮಕ್ಬೂಲ್ ಅಹ್ಮದ್, ಮರಿಯಾ ಲೀಮಾ, ಗ್ರೇಸಿ ಡಯಾಸ್, ಮೈಕೆಲ್ ಡಿಸೋಜ, ರಫೀಕ್ ಬಾಬಾಜಾನ್, ವಿಲ್ಸನ್ ಗೋನ್ಸಾಲ್ವಿಸ್, ಗಣಪತಿ ಮಂಡಗಳಲೆ, ಚೇತನರಾಜ್ ಕಣ್ಣೂರು, ಡಿ.ದಿನೇಶ್, ಸೋಮಶೇಖರ್ ಲ್ಯಾವಿಗೆರೆ, ಮಹಾಬಲ ಕೌತಿ, ಉಷಾ, ಪಾರ್ವತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts