More

    ಬಿಜೆಪಿ ಕೋಟೆ ಭೇದಿಸಲು ಕೈ ರಣತಂತ್ರ

    ಬೆಳಗಾವಿ: ನಗರದ ಕಾಂಗ್ರೆಸ್ ಭವನಲ್ಲಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರ ಜತೆ ಲೋಕಸಭಾ ಉಪಚುನಾವಣೆ ಕುರಿತು ಮಹತ್ವದ ಸಭೆ ಭಾನುವಾರ ಜರುಗಿತು.

    ಮಾ.29ರಂದು ಸತೀಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದು, ಸಭೆಯಲ್ಲಿ ಉಪಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರ ಬಗ್ಗೆ ಚರ್ಚಿಸಿದರು. ಕೈತಪ್ಪಿ ಹೋಗಿದ್ದ ಕಾಂಗ್ರೆಸ್ ಕೋಟೆಯನ್ನು ಮರಳಿ ವಶಕ್ಕೆ ಪಡೆಯುವ ಕುರಿತು, ಜನರ ಮನವೊಲಿಕೆ ತಂತ್ರಗಳ ಕುರಿತು ಚರ್ಚಿಸಲಾಯಿತು.

    ಬೆಳಗಾವಿ ಲೋಕಸಭಾ ಮತ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಉಳಿದ ಐದು ಕ್ಷೇತ್ರದಲ್ಲಿ ಮಾಜಿ ಶಾಸಕರಿಗೆ ಮತ್ತು ಮಾಜಿ ಸಚಿವರಿಗೆ ಜವಾಬ್ದಾರಿ ನೀಡುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

    ಉಪಚುನಾವಣೆಯಲ್ಲಿ ಬಿಜೆಪಿಯನ್ನು ಯಾವ ಯಾವ ವಿಷಯಗಳಲ್ಲಿ ಕೌಂಟರ್ ಮಾಡಬೇಕು? ಯಾವ ವಿಷಯದ ಆಧಾರದ ಮೇಲೆ ಪ್ರಚಾರ ಮಾಡಬೇಕು? ಮರಾಠಿ ಮತಗಳನ್ನು ಹೇಗೆ ಸೆಳೆಯಬೇಕು ಎನ್ನುವುದರ ಬಗ್ಗೆಯೂ ಚರ್ಚೆ ನಡೆದಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಡಿಕೆಶಿ ನೇತೃತ್ವದ ತಂಡ ಮಾಸ್ಟರ್ ಪ್ಲಾನ್ ತಯಾರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಆರ್.ವಿ. ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಅಭ್ಯರ್ಥಿ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕರಾದ ಶ್ಯಾಮ್ ಘಾಟಗೆ, ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

    ಸೋಮವಾರವೂ ಮಹತ್ವದ ಸಭೆ: ಮಾ.29ರಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ,
    ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿ ಕಾಂಗ್ರೆಸ್ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದ್ದು, ನಾಮಪತ್ರ ಸಲ್ಲಿಸಿದ ಬಳಿಕವೂ ಸ್ಥಳೀಯ ಕಾಂಗ್ರೆಸ್ ನಾಯಕರ ಜತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts