More

    ಬಿಜೆಪಿ ಸರ್ಕಾರದಿಂದ ತೆರಿಗೆ ಹಣ ಲೂಟಿ

    ಬೆಳಗಾವಿ: ಕರ್ನಾಟಕದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣವನ್ನು ಲೂಟಿ ಮಾಡಿದ್ದು, ಚುನಾವಣೆ ಬಂದಾಗ ಅಭಿವೃದ್ಧಿ ಜಪ ಮಾಡುತ್ತಿದೆ ಎಂದು ಎಐಸಿಸಿ ವಕ್ತಾರೆ ಪ್ರಣಿತಿ ಶಿಂಧೆ ವಾಗ್ದಾಳಿ ನಡೆಸಿದರು.

    ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ, ಬಡವರಿಗೆ, ಕಾರ್ಮಿಕರಿಗೆ ರಕ್ಷಣೆ ಇಲ್ಲ. ಅಡುಗೆ ಅನಿಲ, ಪೆಟ್ರೋಲ್, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬೀದಿ ಪಾಲಾಗುತ್ತಿದ್ದಾರೆ. ಆದರೆ, ಬಿಜೆಪಿಯವರು ಮಾತ್ರ ಶೇ.40 ಕಮಿಷನ್ ತೆಗೆದುಕೊಳ್ಳುವುದರಲ್ಲಿಯೇ ದಿನ ಕಳೆದಿದ್ದಾರೆ ಎಂದು ಟೀಕಿಸಿದರು.

    ಮೂರು ವರ್ಷದ ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಗಿಂತ ಭ್ರಷ್ಟಾಚಾರವೇ ಹೆಚ್ಚು ಚರ್ಚೆಗೆ ಬಂದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಯೊಂದಕ್ಕೆ ಕಮಿಷನ್ ನೀಡಬೇಕು. ಇಂತಹ ಸರ್ಕಾರದಿಂದ ಅಭಿವೃದ್ಧಿಗಿಂತ ನಷ್ಟವೇ ಹೆಚ್ಚಾಗುತ್ತಿದೆ. ಮಹಿಳೆಯರು, ಮಕ್ಕಳಿಗೆ ಸೂಕ್ತ ಸೌಲಭ್ಯಗಳು ಸಿಗದೆ ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದರು.

    ಎಐಸಿಸಿ ವಕ್ತಾರ ರೋಹನ್ ಗುಪ್ತಾ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದ ಶೇ.40 ಭ್ರಷ್ಟಾಚಾರ ನಡೆಸಿರುವುದು ದೊಡ್ಡ ಪ್ರಚಾರದಲ್ಲಿದೆ. ಪರಿಣಾಮ ರಾಜ್ಯದಲ್ಲಿ 40 ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಲಾಗುವುದು ಎಂದು ಘೋಷಣೆ ಮಾಡುವ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಮತ್ತೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ. ಹಾಗಾಗಿ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟೀಕಿಸುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಬೆಲೆ ಏರಿಕೆಯಿಂದ ಮಹಿಳೆಯರು ತತ್ತರಿಸಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರ ನಡೆಸುತ್ತಿದ್ದರೂ ಮಹಿಳೆಯರಿಗೆ ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಎಐಸಿಸಿ ವಕ್ತಾರ ಅಲೋಕ ಶರ್ಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts