More

    ಮೋದಿ ಸಂಪುಟಕ್ಕೆ ಕುಮಾರಸ್ವಾಮಿ ಜತೆ ಇನ್ನೂ ಮೂವರು ಸಿಎಂಗಳು: ಚುನಾವಣೆಗೆ ಮುನ್ನ ಬಿಜೆಪಿಯ ಬಿಗ್ ಸ್ಟ್ರಾಟಜಿ..!

    Bjp Government To Take A Key Decision Before The Lok Sabha
    ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರದ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ನಾಲ್ವರು ಮಾಜಿ ಮುಖ್ಯಮಂತ್ರಿಗಳನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳಲು ಪ್ರಧಾನಿ ಮೋದಿ ಉದ್ದೇಶಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂದೇಶ ಯಾತ್ರೆ; ಪ್ರಮುಖರ ಸಭೆಯಲ್ಲಿ ಸಮಾಲೋಚನೆ

    ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ, ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಕುಮಾರಸ್ವಾಮಿಯವರು ಹೊರತುಪಡಿಸಿ ಉಳಿದ ಮೂವರು ಬಿಜೆಪಿಯವರು.

    ಕರ್ನಾಟಕದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ನಂತರ ಜೆಡಿಎಸ್​ ನಾಯಕ ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಿರುವುದು ಗೊತ್ತೇ ಇದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಯಾ ರಾಜ್ಯಗಳಲ್ಲಿ ಈಗಿರು ಸ್ಥಾನಗಳ ಜತೆಗೆ ಮತಬ್ಯಾಂಕ್ ಹೆಚ್ಚಿಸಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

    ಇನ್ನೊಂದೆಡೆ ಇತ್ತೀಚೆಗೆ ನಡೆದ ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೂ ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ವಸುಂಧರಾ ಮತ್ತು ಶಿವರಾಜ್ ಸಿಂಗ್ ಅಸಮಾಧಾನಗೊಂಡಿದ್ದು, ಅವರನ್ನು ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಹೈಕಮಾಂಡ್​ಗೆ ತಾಪತ್ರಯ; ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts