More

    ಹನುಮಂತನಂತೆ ಏನು ಬೇಕಾದ್ರೂ ಮಾಡಬಲ್ಲೆ ಎಂಬ ಮನೋಭಾವವನ್ನು ಬಿಜೆಪಿ ಹೊಂದಿದೆ: ಪ್ರಧಾನಿ ಮೋದಿ

    ನವದೆಹಲಿ: ನಮ್ಮ ಪಕ್ಷ ಮತ್ತು ಪಕ್ಷದ ಕಾರ್ಯಕರ್ತರು ನಿರಂತರವಾಗಿ ಹನುಮಂತನ ಮೌಲ್ಯಗಳು ಮತ್ತು ಬೋಧನೆಗಳಿಂದ ಸ್ಫೂರ್ತಿ ಪಡೆಯುತ್ತಾರೆ. ಸಾಗರದಂತಹ ದೊಡ್ಡ ಸವಾಲುಗಳನ್ನು ಎದುರಿಸಲು ಭಾರತ ಇಂದು ಬಲಿಷ್ಠವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    44ನೇ ಬಿಜೆಪಿ‌ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ವರ್ಚುವಲ್ ಭಾಷಣ ಮಾಡಿದರು. ಭಾಷಣದ ಆರಂಭದಲ್ಲಿ ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಎಲ್ಲರಿಗಾಗಿ ನಾನು ಹನುಮಂತನನ್ನು ಪ್ರಾರ್ಥಿಸುತ್ತೇನೆ ಎಂದರು.

    ಬಿಜೆಪಿಯು ಭಾರತಕ್ಕಾಗಿ ಹಗಲು-ರಾತ್ರಿ ದುಡಿಯುತ್ತಿದೆ. ನಮ್ಮ ಪಕ್ಷ ಭಾರತ ಮಾತೆ, ರಾಷ್ಟ್ರ ಮತ್ತು ಸಂವಿಧಾನಕ್ಕೆ ಅರ್ಪಿಸಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    ಇದನ್ನೂ ಓದಿ: ಬಿಜೆಪಿ ಪರ ಸುದೀಪ್ ಪ್ರಚಾರದ ಬಗ್ಗೆ ಕಾಂಗ್ರೆಸ್ ಲೇವಡಿ ವಿಚಾರ: ಬಿಎಸ್​ವೈ ತಿರುಗೇಟು

    ಇಂದು ಭಾರತವು ಹನುಮಂತನ ಶಕ್ತಿಯಂತೆ ತನ್ನ ಸಾಮರ್ಥ್ಯವನ್ನು ಅರಿತುಕೊಳ್ಳುತ್ತಿದೆ. ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯವಸ್ಥೆ ವಿರುದ್ಧ ಹೋರಾಡಲು ಬಿಜೆಪಿ ಪಕ್ಷವು ಹನುಮಂತನಿಂದ ಸ್ಫೂರ್ತಿ ಪಡೆಯುತ್ತದೆ. ನಾವು ಹನುಮಂತನ ಇಡೀ ಜೀವನವನ್ನು ನೋಡಿದರೆ “ಏನು ಬೇಕಾದರೂ ಮಾಡಬಲ್ಲೆ” ಎಂಬ ಮನೋಭಾವವನ್ನು ಹೊಂದಿದ್ದರು. ಇದೇ ಮನೋಭಾವ ಅವರಿಗೆ ಎಲ್ಲ ರೀತಿಯ ಯಶಸ್ಸನ್ನು ತಂದುಕೊಟ್ಟಿತು ಎಂದು ಪ್ರಧಾನಿ ಮೋದಿ ಹೇಳಿದರು.

    ಬಿಜೆಪಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಪ್ರಧಾನ ಮಂತ್ರಿ ಅನ್ನ ಯೋಜನೆಯಡಿ 80 ಕೋಟಿ ಜನರು ಉಚಿತ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಜನರು ಜನ್ ಧನ್ ಯೋಜನೆ ಮತ್ತು ಇತರ ಸರ್ಕಾರಿ ಯೋಜನೆಗಳಿಂದ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇದು ಬಿಜೆಪಿ ಮಾಡುತ್ತಿರುವ ಸಾಮಾಜಿಕ ನ್ಯಾಯವಾಗಿದೆ. ಆದರೆ, ವಿರೋಧ ಪಕ್ಷ ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತದೆ ಎಂದು ಕುಟುಂಬ ರಾಜಕಾರಣದ ವಿರುದ್ಧ ಮೋದಿ ಕಿಡಿಕಾರಿದರು.

    ಭಾಷಣದ ಉದ್ದಕ್ಕೂ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ಕೃಷಿ ಮತ್ತು ರಕ್ಷಣೆಯಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು. ಬಿಜೆಪಿ ಯಾವಾಗಲೂ ತನ್ನ ನೀತಿಯಾಗಿ ರಾಷ್ಟ್ರವನ್ನು ಮೊದಲ ಸ್ಥಾನದಲ್ಲಿಟ್ಟುಕೊಂಡು ಸಮಾಜದ ಎಲ್ಲಾ ವರ್ಗಗಳ ಸಬಲೀಕರಣಕ್ಕಾಗಿ ಶ್ರಮಿಸಿದೆ ಎಂದು ಹೇಳಿದರು.

    ಇದನ್ನೂ ಓದಿ: ಒಕ್ಕೂಟ ವ್ಯವಸ್ಥೆ ಗೌರವಿಸಿ: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ

    ಇದೇ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ಏಪ್ರಿಲ್ 6 ರಿಂದ ಏಪ್ರಿಲ್ 14 ರವರೆಗೆ ಪಕ್ಷವು ಆಯೋಜಿಸಿರುವ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ಮೋದಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಪಕ್ಷದ ಇತಿಹಾಸ, ಸಂಸ್ಕೃತಿ, ದೂರದೃಷ್ಟಿಯ ಬಗ್ಗೆ ಅರಿವು ಮೂಡಿಸಲು ವಿವಿಧ ಹಂತಗಳಲ್ಲಿ ವಿಚಾರ ಸಂಕಿರಣ, ಚರ್ಚೆ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದರು. ಪಕ್ಷದ ಕಾರ್ಯಕ್ರಮಗಳಿಗೆ ಬುದ್ಧಿಜೀವಿಗಳು ಮತ್ತು ಹಿರಿಯ ನಾಗರಿಕರನ್ನು ಆಹ್ವಾನಿಸುವಂತೆಯೂ ಅವರು ಕೇಳಿಕೊಂಡರು. (ಏಜೆನ್ಸೀಸ್​)

    25 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

    ಸುದೀಪ್​ ಹೇಳಿಕೆಯಿಂದ ಆಘಾತ ಹಾಗೂ ನೋವಾಗಿದೆ: ನಟ ಪ್ರಕಾಶ್​ ರಾಜ್​

    ಹೋಗುವಾಗ ಜಂಟಿ ಬರುವಾಗ ಒಂಟಿ: 10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts