ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ, ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: CM ಸಿದ್ದರಾಮಯ್ಯ

dk - 2025-05-12T164922.008
Published on

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು CM ಸಿದ್ದರಾಮಯ್ಯ ಹೇಳಿದರು.

ಎಚ್.ಡಿ.ಕೋಟೆಯಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿ ಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.

ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು

ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದರೆ. ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ದ, ಬಸವ ಅವರು ಜಾತಿಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣರನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ. ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net