

ತುಮಕೂರು: ಯಡಿಯೂರಪ್ಪ ಪುತ್ರ ವಿಜಯೇಂದ್ರ ಅನ್ನುವುದಕ್ಕಿಂತ ಯುವಕ ಎಂಬ ಕಾರಣಕ್ಕೆ ರಾಜ್ಯದಲ್ಲಿ ಪಕ್ಷ ಮುನ್ನೆಡುಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ಮೋದಿ ಅವರು, ಅಮಿತಾ ಷಾ, ಬಿ.ಎಲ್.ಸಂತೋಷ್ ಎಲ್ಲ ಹಿರಿಯರು ಸಮಾಲೋಚನೆ ಮಾಡಿ ರಾಜ್ಯದಲ್ಲಿ ಪಕ್ಷ ಸಂಘಟನೆ ಸಾರಥ್ಯವಹಿಸಿದ್ದಾರೆ. ನೀವೆಲ್ಲಾ ಹೆಮ್ಮೆ ಪಡುವಂತೆ ಪಕ್ಷ ಮುನ್ನಡೆಸುವೆ ಎಂದು ಭರವಸೆ ನೀಡಿದರು.
ತುಮಕೂರು ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ಗ್ರಾಮಾಂತರ ಶಾಸಕ ಬಿ.ಸುರೇಶಗೌಡ, ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಮಾಜಿ ಎಂಎಲ್ಸಿಗಳಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಡಿ.ಲಕ್ಷ್ಮೀನಾರಾಯಣ್ ಇದ್ದರು.