More

    ಕಾಂಗ್ರೆಸ್ ಅಭ್ಯರ್ಥಿ ಹೆಬ್ಬಾಳ್ಕರ್ ಗೆ ಹೀನಾಯ ಸೋಲು!

    -ಸಂಸದೆ ಮಂಗಲ ಅಂಗಡಿ ವಾಗ್ದಾಳಿ
    ಬೆಳಗಾವಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಹೀನಾಯವಾಗಿ ಸೋಲಿಸಲಿದ್ದಾರೆ. ಸುಳ್ಳು ಆರೋಪ ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು ಮಾಡಲಾಗುವುದು ಎಂದು ಸಂಸದೆ ಮಂಗಲ ಅಂಗಡಿ ವಾಗ್ದಾಳಿ ನಡೆಸಿದರು.
    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದ್ರೋಹ, ಹಿಂದು ವಿರೋಧಿ ಯನ್ನು ಕ್ಷೇತ್ರದ ಜನರು‌ ಮರೆತಿಲ್ಲ. ಮನೆ ಮಗಳಿಗೆ ಕಲಿಸಿದ ಪಾಠವನ್ನು ಮನೆ ಮಗನಿಗೂ ಕಲಿಸಲಿದ್ದಾರೆ. ಇವರ ಡ್ರಾಮಾ ಎಲ್ಲರಿಗೂ ಗೊತ್ತಿದೆ ಎಂದರು.
    ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ನಿನ್ನ ಮಾತಿನ ಮೇಲೆ ಹಿಡಿತ ಇರಲಿ ಕಳೆದ  20 ವರ್ಷದಲ್ಲಿ ನಾವು 16 ಸಾವಿರ ಕೋಟಿ ರೂ.ಗಳ ಅನುದಾನ ತಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭಿವೃದ್ಧಿ ಮಾಡಿದ್ದೇವೆ. ಮೃಣಾಲ್ ಸೋಲಿ‌ನ ಹತಾಶೆಯಲ್ಲಿ ಬೇಕಾದನ್ನು ಮಾತನಾಡುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸುಮಾರು 927 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ, ಕಿತ್ತೂರು ಹಾಗೂ ಧಾರವಾಡ ರೈಲು ನಿರ್ಮಾಣಕ್ಕೆ ಕೇಂದ್ರ ಸರಕಾರದ ರೈಲ್ವೆ ಸಚಿವಾಲಯದಿಂದ ಅನುಮತಿ ಪಡೆದಿದ್ದು ಸುರೇಶ ಅಂಗಡಿ, 100 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ನಾಲ್ಕು ರೈಲ್ವೆ ಮೆಲ್ಸೇತುವೆ ನಿರ್ಮಾಣ, 210 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣವನ್ನು ನವೀಕರಣ, 3,600 ಕೋಟಿ ರೂ. ವೆಚ್ಚದಲ್ಲಿ ರೈಲು ಮಾರ್ಗದ ಡಬ್ಬಿಂಗ್ ಮತ್ತು ವಿದ್ಯುದ್ಧೀಕರಣ ಕಾರ್ಯ ಮಿರಜ್ ಲೊಂಡಾ ಮಾರ್ಗದಲ್ಲಿ ಪ್ರಗತಿಯಲ್ಲಿದೆ. ನನ್ನ ಅವಧಿಯಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಇಂಥ ನೀಚ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಮೃಣಾಲ್‌ ವಿರುದ್ಧ ವಾಗ್ದಾಳಿ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts