ಚನ್ನಮ್ಮನ ಕಿತ್ತೂರು ಪಪಂ ಚುನಾವಣೆ ಹಿನ್ನೆಲೆ ಹೈಡ್ರಾಮಾ
ಚನ್ನಮ್ಮನ ಕಿತ್ತೂರು: ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯನನ್ನು ಅಪಹರಣ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ನಾಗೇಶ ಅಸುಂಡಿ ಅಪಹರಣಕ್ಕೊಳಗಾದ ಬಿಜೆಪಿ ಸದಸ್ಯ. ಪಪಂನಲ್ಲಿ ಬಿಜೆಪಿ, ಕಾಂಗ್ರೆಸ್ ಸದಸ್ಯರ ಸಂಖ್ಯಾಬಲ ಸಮ ಇತ್ತು. ಸೆಪ್ಟೆಂಬರ್ 3ರಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ 10.30 ವೇಳೆಗೆ ಬಿಜೆಪಿ ಸದಸ್ಯ ನಾಗೇಶ ಅಸುಂಡಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಪಹರಣ ಮಾಡಿದ್ದಾರೆಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಸಮೀಪದ ಚೌಕಿಮಠ ಕ್ರಾಸ್ ಹತ್ತಿರ ಅಪಹರಣ ಮಾಡಲಾಗಿದ್ದು, ಕಿತ್ತೂರು ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ ಗಂಗೋಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.