14 ಕೋಟಿ ಸದಸ್ಯರನ್ನು ಹೊಂದಿರುವ ಪ್ರಪಂಚದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ ; ಜೆ ಪಿ ನಡ್ಡಾ |J P Nadda

Untitled design (24)
Published on

J P Nadda: 14 ಕೋಟಿ ಸದಸ್ಯರನ್ನು ಹೊಂದಿರುವ ಪ್ರಪಂಚದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ. ಆ 14 ಕೋಟಿ ಜನರಲ್ಲಿ 2 ಕೋಟಿ ಜನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ ಎಂದು ಭಾನುವಾರ (ಸೆ. 14) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ. 14 ಕೋಟಿ ಸದಸ್ಯರನ್ನು ಹೊಂದಿದೆ. ದೇಶದ 20 ರಾಜ್ಯಗಳಲ್ಲಿ ಎನ್ಡಿಎ ಸರ್ಕಾರಗಳಿವೆ. 13 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಬಿಜೆಪಿ ದೇಶವನ್ನು ಪ್ರತಿನಿಧಿಸುವ ಅತಿದೊಡ್ಡ ಪಕ್ಷವೂ ಆಗಿದೆ. 240 ಲೋಕಸಭೆ ಸಂಸದರನ್ನು ಹೊಂದಿದೆ. 1,500 ಶಾಸಕರು ಮತ್ತು 170 ಕ್ಕೂ ಹೆಚ್ಚು ಎಂಎಲ್‌ಸಿಗಳನ್ನು ಹೊಂದಿದೆ ಎಂದರು.

ಮುಂದುವರೆದು ಪ್ರಧಾನಿ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಅವರು, ಕಳೆದ 11 ವರ್ಷಗಳಲ್ಲಿ ಮೋದಿಯವರ ನಾಯಕತ್ವದಲ್ಲಿ ದಕ್ಷ ಮತ್ತು ಜವಾಬ್ದಾರಿಯುತ ಸರ್ಕಾರವನ್ನು ಒದಗಿಸಲಾಗಿದೆ. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.  ರಾಜಧಾನಿ ಅಮರಾವತಿಯ ನಿರ್ಮಾಣಕ್ಕಾಗಿ ಕೇಂದ್ರವು 15,000 ಕೋಟಿ ರೂ.ಗಳನ್ನು ನೀಡಿದೆ ಎಂದು ಹೇಳಿದರು.

ಸೈದ್ದಾಂತಿಕ ಅಡಿಪಾಯದಿಂದ ಹುಟ್ಟಿಕೊಂಡ ಪಕ್ಷ ಎಂದು ಹೇಳುತ್ತಿದ್ದ ಕಾಂಗ್ರೆಸ್, ಕುಟುಂಬ ರಾಜಕಾರಣ, ಭ್ರಷ್ಟಾಚಾರ, ತುಷ್ಟೀಕರಣ ರಾಜಕಾರಣದ ಮಾಡಿತು. ಹಿಂದಿನ ಸರ್ಕಾರಗಳಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಲಿಲ್ಲ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದರು ಎಂದು ಕಾಂಗ್ರೆಸ್ ವಿರುದ್ಧ ನಡ್ಡಾ ಕಿಡಿಕಾರಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net