More

    ಕಾಂಗ್ರೆಸ್ ಮನೆಗೆ ಕಳುಹಿಸಲಿರುವ ಬಿಜೆಪಿ-ಜೆಡಿಎಸ್ ಮೈತ್ರಿ

    ಹುಬ್ಬಳ್ಳಿ : ಭ್ರಷ್ಟಾಚಾರ ಹಾಗೂ ಸ್ವಜನಪಕ್ಷಪಾತದಲ್ಲಿ ಮುಳುಗಿರುವ ಕಾಂಗ್ರೆಸ್ ಅನ್ನು ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮನೆಗೆ ಕಳುಹಿಸಲಿದೆ. ಮುಂದಿನ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

    ನಗರದ ಖಾಸಗಿ ಹೋಟೆಲ್​ನಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

    ಈ ಮೈತ್ರಿಯು ಹಾಲಿನಲ್ಲಿ ಸಕ್ಕರೆ ಹಾಕಿದಂತೆ ಇರಬೇಕು. ಉಪು್ಪ ಹಾಕಿದಂತೆ ಆಗಬಾರದು ಎಂದು ಸಲಹೆ ನೀಡಿದರು.

    ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಯುಪಿಎ ಸರ್ಕಾರ ಅವಧಿಯಲ್ಲಿ ಅನೇಕ ಹಗರಣಗಳು ಬೆಳಕಿಗೆ ಬಂದಿದ್ದವು ಎಂದರು.

    ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಲೇ ಬಂದಿವೆ. ಆ ಅವಧಿಯಲ್ಲಿ

    ಸ್ವಜನಪಕ್ಷಪಾತ, ಭ್ರಷ್ಟಾಚಾರ ಹೆಚ್ಚಾಗಿರುವುದು ಕಂಡುಬರುತ್ತದೆ ಎಂದು ದೂರಿದ ಜೋಶಿ, ಬಿಜೆಪಿ ಹಾಗೂ ಜೆಡಿಎಸ್ ಆಡಳಿತ ಅವಯಲ್ಲಿ ರಾಜ್ಯ ಅಭಿವೃದ್ಧಿಯಾಗಿದೆ ಎಂದು ಹೇಳಿದರು.

    ಜೆಡಿಎಸ್ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರ ಮಾತನಾಡಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ ಜನಪರ ಕಾಳಜಿ ಅಪಾರವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂಬುದು ಅವರಿಗೆ ಗೊತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳು ಹಾಗೂ ನೀರಾವರಿ ಯೋಜನೆ ಅನುಷ್ಠಾನ ಉದ್ದೇಶದಿಂದ ಎನ್​ಡಿಎ ಜತೆಗೆ ಕೈ ಜೋಡಿಸಲಾಗಿದೆ ಎಂದು ತಿಳಿಸಿದರು.

    ಶಾಸಕ ಎಂ.ಆರ್.ಪಾಟೀಲ, ಮಾಜಿ ಸಚಿವ ಕೆ.ಎನ್. ಗಡ್ಡಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಶಿವಶಂಕರ ಕಲ್ಲೂರ, ಬಿ.ಬಿ. ಗಂಗಾಧರಮಠ, ಹಜರತ್​ಅಲಿ ಜೋಡಮನಿ, ಷಣ್ಮುಕ ಗುರಿಕಾರ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts