More

    ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಗೆಲುವು:! ಬಿ.ವೈ.ವಿಜಯೇಂದ್ರ

    ಶಿವಮೊಗ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಇನ್ನೂ ನಾಲ್ಕೈದು ಬಾರಿ ರಾಜ್ಯಕ್ಕೆ ಪ್ರಚಾರಕ್ಕೆ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

    ಇದನ್ನೂ ಓದಿ: ಪ್ರಧಾನಿ ಮೋದಿ ಫೋಟೋ ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ: ಈಶ್ವರಪ್ಪ ತಿರುಗೇಟು

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ರಾಜ್ಯಕ್ಕೆ ಆಗಮಿಸುವರು. ಈ ಬಾರಿ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಪರ ಒಲವು ಕಾಣುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪ್ರಧಾನಿ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮನೆ ಮನೆಯಲ್ಲಿ ‌ಮೋದಿ ಬಗ್ಗೆ ಮಾತನಾಡ್ತಿದ್ದಾರೆ. ಅದು ಕಾಂಗ್ರೆಸ್ ‌ಪಕ್ಷವನ್ನು ನಿದ್ದೆಗೆಡಿಸಿದೆ. ಮೋದಿ ಐದು ಕೆಜಿ ಅಕ್ಕಿ ಕೊಡುವರು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷವಿತ್ತು. ಆದರೆ ಮೋದಿ ಕೊಡಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ಚಿಂತೆಗೀಡು ಮಾಡಿತು. ಅದಕ್ಕಾಗಿ ಈಗ ಅಕ್ಕಿ ಬದಲು ಹಣ ಕೊಡುತ್ತಿದ್ದಾರೆ ಎಂದರು.

    ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಬಾರದು: ದೇಶದ ಜನರು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ. ರಾಜ್ಯದಲ್ಲೂ ಬಿಜೆಪಿ 28 ಸ್ಥಾನ ಬರುವುದರಲ್ಲಿ ಯಾವುದೇ ಅನುಮಾನ ‌ಇಲ್ಲ. ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷ ದಿಕ್ಕಾಪಾಲಾಗುತ್ತದೆ. ಪ್ರಪಂಚದಲ್ಲಿ 8ನೇ ಅದ್ಭುತ ಏಂದರೆ ರಾಜ್ಯದಲ್ಲಿ ‌ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲ್ಲ. ಜನರು ಮೋದಿ ಗ್ಯಾರಂಟಿ ನೋಡುತ್ತಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ನೋಡುತ್ತಿಲ್ಲ ಎಂದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಿದರೆ‌ ನಾವು ಬಿಡಲ್ಲ. ಗ್ಯಾರಂಟಿ ಯೋಜನೆ ಮೇಲೆ ಅಧಿಕಾರಕ್ಕೆ ಬಂದಿದ್ದೀರ ಅದನ್ನು ‌ಮುಂದುವರಿಸಿ ಎಂದು ಆಗ್ರಹಿಸಿದರು.

    ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಗೆಲುವು:! ಬಿ.ವೈ.ವಿಜಯೇಂದ್ರ

    ಈಶ್ವರಪ್ಪ ಅವರಿಗೆ ಇನ್ನು ಕಾಲ ಮಿಂಚಿಲ್ಲ

    ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಇನ್ನೂ ಕಾಲ ಮಿಂಚಿಲ್ಲ. ಅವರೂ ನಮ್ಮ ಜತೆ ಇರಬೇಕು ಎಂಬುದು ನಮ್ಮ ಆಸೆ. ಏನೇ ಸಮಸ್ಯೆ ಇದ್ದರೂ ದೆಹಲಿ ನಾಯಕರ ಜತೆ ಮಾತನಾಡಿ. ನಾವಂತು ನಿಮ್ಮ ಜತೆ‌ ಇರುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.ಈಶ್ವರಪ್ಪ ಹಿರಿಯರು. ಪಕ್ಷ ಕಟ್ಟಲು ಅವರ ಪಾಲು ದೊಡ್ಡದಿದೆ. ಯಾವುದೋ ಪರಿಸ್ಥಿತಿ, ಸಂದರ್ಭ ಈ ಸನ್ನಿವೇಶಕ್ಕೆ ಅವರನ್ನು ದೂಡಿದೆ. ಮೋದಿ ಪ್ರಧಾನಿಯಾಗಲು ಪಕ್ಷದ ಹಿತದೃಷ್ಟಿಯಿಂದ ತಾವು ಕೈಜೋಡಿಸಬೇಕು. ಬಿ.ವೈ.ರಾಘವೇಂದ್ರ ಅವರ ಅಭಿವೃದ್ಧಿ ಬಗ್ಗೆ ಜನ ಮಾತನಾಡುತ್ತಿದ್ದಾರೆ ಎಂದರು. ರಾಘವೇಂದ್ರ ಈ ಬಾರಿ ಎರಡು ಲಕ್ಷದ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.

    ಬರ ಪರಿಹಾರ ಕೊಡಲು ಏನು ದಾಡಿ

    ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರಿಗೆ ಏನು ಮಾಡಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರ ಇದ್ದಾಗ ಸಾಕಷ್ಟು ಅನುದಾನ ಕೊಟ್ಟಿತ್ತು. ರೈತರಿಗೆ ಬರ ಪರಿಹಾರ ಕೊಡಲು ಕಾಂಗ್ರೆಸ್ ಗೆ ಏನು ದಾಡಿ ಆಗಿದೆ ?‌.‌ ಮೊದಲು ರೈತರಿಗೆ ಪರಿಹಾರ ಕೊಡಿ ಎಂದು ವಿಜಯೇಂದ್ರ ಕಿಡಿಕಾರಿದರು. ಕಳೆದ ಬಾರಿಗಿಂತ ರೈತರ ಆತ್ಮಹತ್ಯೆ ‌ಕಡಿಮೆ ಆಗಿದೆ ಅಂತಾರೆ. ಹಾಗಾದರೆ ಅದೇ ನಿಮ್ಮ ಸಾಧನೆನಾ ಎಂದು ಸರ್ಕಾರಕ್ಕೆ ಚಾಟಿ ಬೀಸಿದರು. ಕೇಂದ್ರ ಸರ್ಕಾರದ ಯೋಜನೆ ರಾಜ್ಯದ ಜನರಿಗೆ ಸಿಗಬಾರದು ಅಂತಾ ಕಾಂಗ್ರೆಸ್ ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

    ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಜತೆ ಮಾತನಾಡಿದ್ದೇನೆ. ಮೈಸೂರು, ಚಾಮರಾಜನಗರ ಕ್ಷೇತ್ರಗಳ ‌ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲವೂ ಸರಿ ಹೋಗುತ್ತದೆ. ಹಾಸನದಲ್ಲಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

    ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts