ಬಿಜೆಪಿ-ಜೆಡಿಎಸ್ ಪಾದಯಾತ್ರೆ: ನಾಳೆ ಒಂದು ಲಕ್ಷ ಕಾರ್ಯಕರ್ತರಿಂದ ಬೃಹತ್ ಸಮಾವೇಶ ಆಯೋಜನೆ

ಬೆಂಗಳೂರು: ಹಗರಣಗಳ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶವು ನಾಳೆ (ಆ.10) ಬೆಳಿಗ್ಗೆ 10.30ಕ್ಕೆ ಮೈಸೂರಿನಲ್ಲಿ ಆಯೋಜನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಇದನ್ನೂ ಓದಿ: ಪಂಜಾಬ್-ಜಮ್ಮು ಗಡಿಯಲ್ಲಿ ಭಾರತೀಯ ಸೇನೆಯಿಂದ ಕಟ್ಟೆಚ್ಚರ, ಸಿ.ಸಿ.ಟಿ.ವಿ ನಿಯೋಜನೆ

ಮೈಸೂರು ಚಲೋ ಪಾದಯಾತ್ರೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ನಮ್ಮ ಈ ಹೋರಾಟವು ತಾರ್ಕಿಕ ಅಂತ್ಯದತ್ತ ನಡೆಯಲಿದೆ ಎಂದು ವಿಶ್ವಾಸದಿಂದ ನುಡಿದರು.

ನಾಳೆ ಬೆಳಿಗ್ಗೆ ಮಹಾರಾಜ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುತ್ತಾರೆ. ಕೇಂದ್ರದ ಸಚಿವರು, ಬಿಜೆಪಿ- ಜೆಡಿಎಸ್ ಪಕ್ಷಗಳ ಸಂಸದರು, ಶಾಸಕ ಮಿತ್ರರು ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮೂಲೆ ಮೂಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಬರಲಿದ್ದಾರೆ ಎಂದ ಅವರು, ತಾಯಿ ಚಾಮುಂಡೇಶ್ವರಿಯ ಬಳಿ ಬಂದು ಪೂಜೆ ಸಲ್ಲಿಸಿ, ಬೆಂಗಳೂರಿನಲ್ಲಿ ಕೆಂಪಮ್ಮ ದೇವಾಲಯದಲ್ಲಿ ಪೂಜೆ ನೆರವೇರಿಸಿ ಪಾದಯಾತ್ರೆ ಶುರು ಮಾಡಿದ್ದೆವು. ವರುಣದೇವತೆ ಆಶೀರ್ವಾದ ಮಾಡಿ ಬೀಳ್ಕೊಡುಗೆ ಕೊಟ್ಟಿದ್ದರು ಎಂದು ನೆನಪಿಸಿಕೊಂಡರು.

ಇವತ್ತು ನಾವು ಮೈಸೂರಿಗೆ ಪಾದಾರ್ಪಣೆ ಮಾಡಿದಾಗ ವರುಣ ದೇವತೆ ಆಶೀರ್ವಾದ ಮಾಡಿದ್ದಾರೆ. ಇದು ಮತ್ತೆ ಶುಭ ಸೂಚನೆ ಎಂದು ವಿಶ್ಲೇಷಿಸಿದರು. ನಾಳೆ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಿದ್ದೇವೆ. ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.

ವಯನಾಡಿಗೆ ನಾಳೆ ಪ್ರಧಾನಿ ಮೋದಿ ಭೇಟಿ: ರಾಷ್ಟ್ರೀಯ ವಿಪತ್ತು ಘೋಷಣೆ ಸಾಧ್ಯತೆ!

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…