More

    ಬಿಜೆಪಿ-ಜೆಡಿಎಎಸ್​ನವರು​ ಕಾವೇರಿ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

    ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ. ಅವರು ಈ ವಿಚಾರವನ್ನು ರಾಜ್ಯದ ಅಥವಾ ಜನರ ಹಿತಾಸಕ್ತಿಗಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಿಜೆಪಿ-ಜೆಡಿಎಸ್​ನವರು ರಾಜಕೀಯ ಹಿತಾಸಕ್ತಿಗಾಗಿ ಕಾವೇರಿ ವಿಚಾರವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ವಾದಿಸಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ ಹಿಂದೆ ಇದ್ದ ಕಾನೂನು ತಂಡವೇ ಈಗಲೂ ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸುತ್ತಿದೆ. ಅವರು ಸಮರ್ಪಕವಾಗಿ ವಾದ ಮಂಡಿಸಿದ್ದಾರೆ. ಮಳೆ ಕೈಕೊಟ್ಟಾಗ ಕರ್ನಾಟಕ ಹಾಗೂ ತಮಿಳುನಾಡು ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಇಂತಹ ಸಮಯದಲ್ಲಿ ಸಂಕಷ್ಟ ಸೂತ್ರವನ್ನು ಅನುಸರಿಸುವುದು ಸೂಕ್ತ ಎಂದಿದ್ದಾರೆ.

    ಇದನ್ನೂ ಓದಿ: ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಬಡಿದ ಸಿಡಿಲು; ಇಬ್ಬರು ಸಾವು, ಮೂವರು ಚಿಂತಾಜನಕ

    ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಹೊರಗೆ ಪರಿಹಾರ ಸೂತ್ರವನ್ನು ಕಂಡುಹಿಡಿಯಬೇಕು. 67 ಟಿಎಂಸಿ ಸಾಮರ್ಥ್ಯವಿರುವ ಮೇಕೆದಾಟು ಜಲಾಶಯವನ್ನು ನಿರ್ಮಿಸಿದರೆ ಸಂಕಷ್ಟದ ಸಮಯದಲ್ಲಿ ಉಭಯ ರಾಜ್ಯಗಳಿಗೂ ಸಹಾಯ ಮಾಡುತ್ತದೆ.

    ಮಾಜಿ ಪ್ರಧಾನಿ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿ ನಾನು ಈ ವಿಚಾರವನ್ನು ಸ್ವಾಗತಿಸುತ್ತೇನೆ ಮತ್ತು ರಾಜ್ಯ ಸರ್ಕಾರ ಸಮಸ್ಯೆ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಹೇಳಿರುವುದು ಸರಿಯಲ್ಲ. ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ ಯಾವತ್ತಿಗೂ ಸಹ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರಕ್ಕಿಂತ ರಾಜ್ಯದ ಜನರ ಹಿತಾಸಕ್ತಿ ಮುಖ್ಯ ಎಂದು ಹೇಳಿದ್ದಾರೆ.

    ಬೆಂಗಳೂರು ಬಂದ್​ ವಿಚಾರವಾಗಿ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಬಂದ್​ ಆಚರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ, ತಮ್ಮ ಮೂಲಭೂತ ಹಕ್ಕು ಚಲಾಯಿಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ನಾವು ನಗರದಾದ್ಯಂತ 144 ಸೆಕ್ಷನ್​ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts