More

    ನೇಹಾ ಹತ್ಯೆ ಖಂಡಿಸಿ ರಾಮನಗರದಲ್ಲಿ ಬಿಜೆಪಿ ಜೆಡಿಎಸ್ ಪ್ರತಿಭಟನೆ

    ರಾಮನಗರ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಹೇಳಿಕೆಗಳನ್ನು ಖಂಡಿಸಿ ಐಜೂರು ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಉಭಯ ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದರು.

    ಬಿಜೆಪಿ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಕೊಲೆಯಾದ ಯುವತಿ ನೇಹಾರ ಪ್ರಕರಣದ ಆರೋಪಿಯನ್ನು ರಕ್ಷಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಓಲೈಕೆ ರಾಜಕರಣ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಮನಗರ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಆರ್. ನಾಗರಾಜ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಪರಮೇಶ್ವರ್ ಬೇಕಾಬಿಟ್ಟಿ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಒಂದು ಸಮುದಾಯ ಒಲೈಕೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಜನರು ಖಂಡಿಸುತ್ತಾರೆ. ಕೂಡಲೇ ಸರ್ಕಾರ ಆರೋಪಿಗೆ ಉಗ್ರ ಶಿಕ್ಷೆ ಆಗುವಂತೆ ಮಾಡಬೇಕಿದೆ ಎಂದು ಆಗ್ರಹಿಸಿದರು.

    ಜೆಡಿಎಸ್ ಮುಖಂಡ ನರಸಿಂಹಮೂರ್ತಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಭಾಗ್ಯಗಳನ್ನು ಕೊಟ್ಟಿದೆ, ಆದರೆ ಮಹಿಳೆಯರ ಪ್ರಾಣ ರಕ್ಷಣೆಯ ಗ್ಯಾರಂಟಿ ಇಲ್ಲಂದAತಾಗಿದೆ ನೇಹಾಳ ಕೊಲೆ ಆರೋಪಿ ಒಬ್ಬ ಅಲ್ಪಸಂಖ್ಯಾತ ಸಮುದಾಯದವನಾಗಿದ್ದಾನೆ. ಹೀಗಾಗಿ ಆ ಸಮುದಾಯವನ್ನು ಓಲೈಸಲು ಗೃಹ ಸಚಿವರು, ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದು ದೂರಿದರು.

    ಕೊಲೆಯಾದ ನೇಹಾರ ತಂದೆ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್. ಆದರೆ ಅವರ ಮಗಳ ಕೊಲೆಗೆ ಕಾಂಗ್ರೆಸ್ ಸರ್ಕಾರದಿಂದಲೇ ನ್ಯಾಯ ಸಿಗುತ್ತಿಲ್ಲ ಯುವತಿ ನೇಹಾರ ಕೊಲೆ ವಿಚಾರ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ನಡವಳಿಕೆಗಳನ್ನು ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಗಮನಿಸಬೇಕು. ಮಹಿಳೆಯರ ಪ್ರಾಣದ ವಿಚಾರದಲ್ಲಿ ಇಂತಹ ನಡವಳಿಕೆ ಇರುವ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಬೇಕೆ ಎಂಬುದನ್ನು ಯೋಚಿಸಿ ಎಂದರು.

    ಬಿಜೆಪಿ ಜಿಲ್ಲಾ ಘಟಕದ ಮಾಜಿ ಕಾರ್ಯದರ್ಶಿ ರುದ್ರದೇವರು ಮಾತನಾಡಿ ನೇಹ ಕೊಲೆ ಪ್ರಕರಣದ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬಹುಸಂಖ್ಯಾತ ಹಿಂದೂ ಮಹಿಳೆಯರಿಗೆ ರಕ್ಷಣೆ ರಾಜ್ಯದಲ್ಲಿ ಸಿಗುತ್ತಿಲ್ಲ. ಅಲ್ಪಸಂಖ್ಯಾತರ ಓಲೈಕೆಯಲ್ಲಿ ರಾಜ್ಯದ ಗೃಹ ಸಚಿವರು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ದರ್ಶನ್, ಪ್ರಧಾನ ಕಾರ್ಯದರ್ಶಿಗಳಾದ ಕಿಶನ್‌ಗೌಡ, ಕಾಳಯ್ಯ, ಸಂಜಯ್, ಕಾರ್ಯದರ್ಶಿ ರಮೇಶ್, ಮುಖಂಡರಾದ ಅಂಜನಾಪುರ ವಾಸುನಾಯ್ಕ, ಗೌಡಯ್ಯನದೊಡ್ಡಿ ಕೃಷ್ಣ, ಮುಕುಂದರಾಜ್, ಶಿವಾನಂದ್, ನಾಗೇಶ್, ಧರ್ಮೇಂದ್ರ, ಜಯಕುಮಾರ್, ಹೊಸದೊಡ್ಡಿ ನಾಗರಾಜು, ಶಿವಲಿಂಗಯ್ಯ, ಭರತ್‌ರಾಜ್, ಮಂಜುನಾಥ್, ಕೆಂಪರಾಜು, ಮಂಜು, ರಾಮಾಂಜನಿ, ಕೃಷ್ಣ, ಆಡಿಟರ್ ಕುಮಾರ್, ರಮೇಶ್, ಚನ್ನಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts