More

    ಬಿಜೆಪಿ-ಜೆಡಿಎಸ್​ ಸೀಟು ಹಂಚಿಕೆ ಬಹುತೇಕ ಫೈನಲ್; ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ?

    ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದು, ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆ ಬಹುತೇಕ ಅಂತಿಮಗೊಂಡಿದೆ. ಸುದ್ದಿ ಮೂಲಗಳ ಪ್ರಕಾರ ಬಿಜೆಪಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗಿದೆ.

    ಬಿಜೆಪಿ ಹೈಕಮಾಂಡ್​​ ಜತೆ ಮಾತುಕತೆ ನಡೆಸಿದ ನಂತರ 4 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ ಕೈಗೊಂಡಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಫಿಕ್ಸ್ ಎನ್ನಲಾಗಿದೆ. ಮೈಸೂರು ಅಥವಾ ತುಮಕೂರು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಆಯ್ಕೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಜೆಡಿಎಸ್​ಗೆ ಸಲಹೆ ನೀಡಿದೆ ಎಂದು ಹೇಳಲಾಗಿದೆ.

    ಇದನ್ನೂ ಓದಿ: ವಿಶ್ವವಿದ್ಯಾಲಯ ಒಂದರಲ್ಲಿ ಗುಂಡಿನ ದಾಳಿ; 15 ಮಂದಿ ಸಾವು

    ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಜನವರಿ ಅಂತ್ಯದ ವೇಳೆಗೆ ಸೀಟು ಹಂಚಿಕೆ ಪೂರ್ಣಗೊಳ್ಳಲಿದೆ. ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ನಾವು ಕುಳಿತು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

    ನಾವು ಒಂದು ಸ್ಥಾನ ಗಳಿಸಬಹುದು ಅಥವಾ ಕಳೆದುಕೊಳ್ಳಬಹುದು. ಇದರಿಂದ ಸಮಸ್ಯೆ ಆಗುವುದಿಲ್ಲ. ನಮಗೆ ಬೇಕಾಗಿರುವುದು ಪರಸ್ಪರ ನಂಬಿಕೆ, ನಾವು ಗೆಲ್ಲಬಹುದಾದ ಕ್ಷೇತ್ರಗಳ ಕುರಿತು ನಮ್ಮ ಬಳಿ ವರದಿ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೇ ಅವಧಿಗೆ ಆಯ್ಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts